Select Your Language

Notifications

webdunia
webdunia
webdunia
webdunia

ಬ್ರಿಜ್ ಭೂಷಣ್ ಸಿಂಗ್‌ಗೆ ಮಧ್ಯಂತರ ಜಾಮೀನು

ಬ್ರಿಜ್ ಭೂಷಣ್ ಸಿಂಗ್
ನವದೆಹಲಿ : ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕೋರ್ಟ್ 25,000 ರೂ. ಬಾಂಡ್ ಮೇಲೆ 2 ದಿನದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಇದೇ ವೇಳೆ ಡಬ್ಲ್ಯುಎಫ್ಐನ ಅಮಾನತುಗೊಂಡಿರುವ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ಗೂ ಮಧ್ಯಂತರ ಜಾಮೀನು ನೀಡಲಾಗಿದೆ. ನ್ಯಾಯಾಲಯವು ಗುರುವಾರ ಸಾಮಾನ್ಯ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಐದು ದಿನಗಳ ಕಾಲ ಸಾಧಾರಣ ಮಳೆ