Publish Date: Fri, 05 Jun 2020 (09:25 IST)
Updated Date: Fri, 05 Jun 2020 (09:27 IST)
ನವದೆಹಲಿ: ಕೊರೋನಾ ಬಳಿಕ ಒಂದೊಂದಾಗಿ ಸಹಜ ಸ್ಥಿತಿಗೆ ಬರುತ್ತಿದ್ದು, ಈಗ ಕೇಂದ್ರ ಅಂತಾರಾಷ್ಟ್ರೀಯ ವಿಮಾನ ಹಾರಾಟವನ್ನು ಪುನರಾರಂಭ ಮಾಡಲು ಸಿದ್ಧತೆ ನಡೆಸಿದೆ.
ಈ ಹಿಂದೆಯೇ ಜುಲೈ ಅಂತ್ಯ ಅಥವಾ ಆಗಸ್ಟ್ ವೇಳೆಗೆ ಅಂತಾರಾಷ್ಟ್ರೀಯ ವಿಮಾನಗಳ ಪುನರಾರಂಭ ಮಾಡಲು ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ಹೇಳಿದ್ದರು.
ಅದರಂತೆ ಈಗ ಪರಿಸ್ಥಿತಿ ಬಗ್ಗೆ ಸೂಕ್ಷ್ಮವಾಗಿ ಅವಲೋಕನೆ ಮಾಡಲಾಗುತ್ತಿದ್ದು, ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ಕೊಡಲಾಗುತ್ತದೆ. ನಾಗರಿಕ ವಿಮಾನ ಯಾನ ಸಚಿವಾಲಯ ಜುಲೈ ಅಂತ್ಯದ ವೇಳೆಗೆ ಅಂತಾರಾಷ್ಟ್ರೀಯ ವಿಮಾನ ಆರಂಭಿಸಲು ತಯಾರಿ ನಡೆಸುತ್ತಿದೆ ಎನ್ನಲಾಗಿದೆ.