Select Your Language

Notifications

webdunia
webdunia
webdunia
webdunia

ಮಣಿಪುರದಲ್ಲಿ ಇಂಟರ್ನೆಟ್ ಸ್ಥಗಿತ!

ಮಣಿಪುರದಲ್ಲಿ ಇಂಟರ್ನೆಟ್ ಸ್ಥಗಿತ!
ಇಂಫಾಲ , ಭಾನುವಾರ, 7 ಆಗಸ್ಟ್ 2022 (15:32 IST)
ಇಂಫಾಲ : ಹಲವು ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಮಣಿಪುರದ ಬುಡಕಟ್ಟು ವಿದ್ಯಾರ್ಥಿ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು,

ಇದು ಹಿಂಸಾಚಾರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆ ಮಣಿಪುರ ರಾಜ್ಯ ಸರ್ಕಾರ 5 ದಿನಗಳ ಕಾಲ ರಾಜ್ಯಾದ್ಯಂತ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.

ಶನಿವಾರ ಸಂಜೆ ಮಣಿಪುರದಲ್ಲಿ 3-4 ಮಂದಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಬಿಷ್ಣುಪುರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದರು. ಈ ಹಿನ್ನೆಲೆ ಮಣಿಪುರ ಸರ್ಕಾರ ತುರ್ತು ಆದೇಶದಲ್ಲಿ 5 ದಿನಗಳ ಕಾಲ ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ತಿಳಿಸಿದೆ.

ಕೆಲ ಕಿಡಿಗೇಡಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದಾರೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಇಲಾಖೆಯ ಆಯುಕ್ತ ಹೆಚ್. ಜ್ಞಾನ್ ಪ್ರಕಾಶ್ ತಿಳಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರಧ್ವಜದಲ್ಲಿ ರಾಜಕೀಯ ‌ಮಾಡುವ ಕಾಂಗ್ರೆಸ್​​ಗೆ ನಾಚಿಕೆ ಆಗಬೇಕು - ಜಗದೀಶ್ ಶೆಟ್ಟರ್