Select Your Language

Notifications

webdunia
webdunia
webdunia
webdunia

ಐಪಿಎಲ್ ಸ್ಪಾಟ್ ಫಿಕ್ಸಿಂಗ್: ದಾವೂದ್ ಇಬ್ರಾಹಿಂ, ಛೋಟಾ ಶಕೀಲ್ ಘೋಷಿತ ಅಪರಾಧಿಗಳು

ಐಪಿಎಲ್ ಸ್ಪಾಟ್ ಫಿಕ್ಸಿಂಗ್: ದಾವೂದ್ ಇಬ್ರಾಹಿಂ, ಛೋಟಾ ಶಕೀಲ್ ಘೋಷಿತ ಅಪರಾಧಿಗಳು
ನವದೆಹಲಿ , ಬುಧವಾರ, 1 ಅಕ್ಟೋಬರ್ 2014 (11:26 IST)
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರ ಛೋಟಾ ಶಕೀಲ್‌ನನ್ನು 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರರೆಂದು ಪರಿಗಣಿಸಿ ಘೋಷಿತ ಅಪರಾಧಿಗಳೆಂದು ದೆಹಲಿ ನ್ಯಾಯಾಲಯ ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಬ್ಬರ ಆಸ್ತಿ ಮುಟ್ಟುಗೋಲು ಪ್ರಕ್ರಿಯೆಯನ್ನು ಪೊಲೀಸರು ಪೂರ್ಣಗೊಳಿಸಿದ ಬಳಿಕ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ನೀನಾ ಬನ್ಸಾಲ್ ಕೃಷ್ಣಾ ಈ ಘೋಷಣೆ ಮಾಡಿದ್ದಾರೆ. ಇದಕ್ಕೂ ಮೊದಲು ನ್ಯಾಯಾಲಯ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು. 
 
ಕಳೆದ ಅಗಸ್ಟ್ ತಿಂಗಳಲ್ಲಿ ಕೋರ್ಟ್ ಅವರಿಬ್ಬರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿತ್ತು. 1993ರ ಮುಂಬೈ ಸ್ಫೋಟ ಪ್ರಕರಣದ ನಂತರ ಅವರಿಬ್ಬರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಆ ಸ್ಫೋಟದ ನಂತರ ಅವರಿಬ್ಬರು ಭಾರತಕ್ಕೆ ಮರಳಿ ಬಂದಿಲ್ಲ ಎಂದು ದೆಹಲಿ ಪೊಲೀಸರು ಮಂಗಳವಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.
 
ದಾವೂದ್ ಇಬ್ರಾಹಿಂ ಮತ್ತು ಶಕೀಲ್ ಜೊತೆಗೆ ಕೈ ಜೋಡಿಸಿದ್ದ ಎನ್ನಲಾದ ಚಂಡಿಗಢ ಮೂಲದ ಸಂದೀಪ್ ಶರ್ಮ ಎಂಬಾತನನ್ನೂ ಘೋಷಿತ ಅಪರಾಧಿ ಎಂದು ಪರಿಗಣಿಸಲಾಗಿದ್ದು, ಮುಂದಿನ ವಿಚಾರಣೆ ನವೆಂಬರ್ 14ಕ್ಕೆ ಮುಂದೂಡಲಾಗಿದೆ. 

Share this Story:

Follow Webdunia kannada