ನವದೆಹಲಿ : ಪ್ರವಾದಿ ಮೊಹಮ್ಮದ್ ಬಗೆಗಿನ ವಿವಾದಾತ್ಮಕ ಹೇಳಿಕೆ ಜಾಗತಿಕವಾಗಿ ಆಕ್ರೋಶಕ್ಕೆ ಕಾರಣವಾಗಿದೆ.
 
ಈ ಘಟನೆಗೆ ಸಂಬಂಧಿಸಿದಂತೆ ಭಾರತ ತೆಗೆದುಕೊಂಡ ನಿರ್ಧಾರದ ಬಗ್ಗೆ ತೃಪ್ತಿಯಿದೆ ಎಂದು ಇರಾನ್ ಹೇಳಿದೆ.
 
 			
 
 			
					
			        							
								
																	ಭಾರತಕ್ಕೆ ಭೇಟಿ ನೀಡಿದ ಇರಾನ್ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದವರ ಬಗ್ಗೆ ಭಾರತ ಸರ್ಕಾರ ತೆಗೆದುಕೊಂಡಿರುವ ಕ್ರಮ ಹಾಗೂ ಪ್ರಯತ್ನಗಳಿಂದ ನಮಗೆ ತೃಪ್ತಿ ಇದೆ ಎಂದು ತಿಳಿಸಿದ್ದಾರೆ. 
									
										
								
																	ಕಳೆದ ವರ್ಷ ಅಧಿಕಾರ ವಹಿಸಿಕೊಂಡ ಬಳಿಕ ಬುಧವಾರ ಮೊದಲ ಬಾರಿ ಭಾರತಕ್ಕೆ ಭೇಟಿ ನೀಡಿದ ಅಬ್ದುಲ್ಲಾಹಿಯಾನ್ ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ರನ್ನು ಭೇಟಿಯಾದರು.
									
											
							                     
							
							
			        							
								
																	ಸಭೆಯಲ್ಲಿ ಮಾಜಿ ಬಿಜೆಪಿ ವಕ್ತಾರರ ವಿವಾದಾತ್ಮಕ ಹೇಳಿಕೆ ವಿಚಾರವನ್ನು ಪ್ರಸ್ತಾಪಿಸಲಾಯಿತು.