ಚಿಂತೆ ಬಿಡಿ; ಐಆರ್‌‌ಸಿಟಿಸಿ ವೆಬ್‌ಸೈಟ್ ಹ್ಯಾಕ್ ಆಗಿಲ್ಲ

Webdunia
ಗುರುವಾರ, 5 ಮೇ 2016 (18:56 IST)
ಐಆರ್‌‌ಸಿಟಿಸಿ ವೆಬ್‌ಸೈಟ್ ಹ್ಯಾಕ್ ಆಗಿದೆ ಎಂಬ ವರದಿಯನ್ನು ರೈಲ್ವೆ ಸಚಿವಾಲಯ ತಳ್ಳಿ ಹಾಕಿದೆ. ಐಆರ್‌ಸಿಟಿಸಿ ವೆಬ್‌ಸೈಟ್ ಸುರಕ್ಷಿತವಾಗಿದ್ದು, ಹ್ಯಾಕ್ ಆಗಿಲ್ಲ ಸಿಆರ್‌ಐಎಸ್ ಮತ್ತು ಐಆರ್‌‌ಸಿಟಿಸಿ ತಾಂತ್ರಿತ ತಂಡಗಳಿಗೆ ಅಂತಹ ಯಾವುದೇ ಪ್ರಯತ್ನಗಳು ನಡೆದ ಕುರುಹು ಸಿಕ್ಕಿಲ್ಲ, ಇದು ಕೇವಲ ವದಂತಿ ಎಂದು  ಸಚಿವಾಲಯ ಸ್ಪಷ್ಟ ಪಡಿಸಿದೆ.

ವೆಬ್‌ಸೈಟ್ ಹ್ಯಾಕ್ ಆಗಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ 6 ಮಂದಿ ಸದಸ್ಯರುಳ್ಳ ತನಿಖಾ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿ ನೀಡಿರುವ ಪ್ರಾಥಮಿಕ ವರದಿಗಳ ಪ್ರಕಾರ ಅಂತಹ ಯಾವ ಪ್ರಯತ್ನಗಳು ನಡೆದಿಲ್ಲ ಎಂದು ತಿಳಿದು ಬಂದಿದೆ.
 
ಭಾರತೀಯ ರೈಲ್ವೇ ಕೇಟರಿಂಗ್ ಮತ್ತು ಟೂರಿಸಂ ಕಾರ್ಪೋರೇಷನ್ (ಐಆರ್‌ಸಿಟಿಸಿ) ವೆಬ್ ಸೈಟ್ ಅನ್ನು ಹ್ಯಾಕ್ ಮಾಡಿ ಲಕ್ಷಾಂತರ ನಾಗರಿಕರ ವೈಯಕ್ತಿಕ ಮಾಹಿತಿ ಕಳುವು ಮಾಡಲಾಗಿದೆ ಎಂದು  ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು.
 
ಟಿಕೆಟ್ ಬುಕ್ ಮಾಡುವ ಸಂದರ್ಭದಲ್ಲಿ ಪ್ರಯಾಣಿಕರು ನೀಡುವ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ವಿವರಣೆಯನ್ನು ನೀಡಿರುತ್ತಾರೆ. ಇಂತಹ 1 ಕೋಟಿಗೂ ಹೆಚ್ಚು ಗ್ರಾಹಕರ ವೈಯಕ್ತಿಕ ಮಾಹಿತಿಯನ್ನು ಪಿಎನ್ಆರ್ ಸ್ಟೇಟಸ್‌ನಿಂದ ಹ್ಯಾಕ್ ಮಾಡಿ ಕದ್ದು  ಪ್ರತಿಯೊಂದು ಡೇಟಾವನ್ನು 15,000 ರೂಪಾಯಿಗೆ ಮಾರಲಾಗಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ದಾಖಲೆ ಕದ್ದು ಕಾರ್ಪೋರೇಟ್ ಕಂಪನಿಗಳಿಗೆ ಮಾರಬಹುದು ಅಥವಾ ಫೋರ್ಜರಿ ದಾಖಲೆ ಸೃಷ್ಟಿಸಿ ಬಳಸಬಹುದೆಂಬ ಆತಂಕ ಎದುರಾಗಿತ್ತು.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊನ್ನಾಳಿ ಪಟ್ಟಣದಲ್ಲಿ ರಸ್ತೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ರೇಣುಕಾಚಾರ್ಯ

ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

ಮನೆಯೊಳಗೆ ಇರುವಂತೆ ಮಾಡಿದ ರಾಷ್ಟ್ರ ರಾಜಧಾನಿ ವಾಯುಮಾಲಿನ್ಯ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ಮುಂದಿನ ಸುದ್ದಿ
Show comments