Publish Date: Wed, 05 Apr 2017 (08:09 IST)
Updated Date: Wed, 05 Apr 2017 (08:14 IST)
ಮುಂಬೈ: ವಾಣಿಜ್ಯ ನಗರಿ ಮುಂಬೈ ಮೇಲೆ ದಾಳಿ ನಡೆಸಲು ಐಸಿಸ್ ಉಗ್ರರು ಸಂಚು ನಡೆಸುತ್ತಿದ್ದಾರೆಂದು ಕೇಂದ್ರ ಗುಪ್ತಚರ ಇಲಾಖೆ ಹಾಗೂ ಕರಾವಳಿ ಪಡೆ ಎಚ್ಚರಕೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಬೈಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಸಮುದ್ರ ಮಾರ್ಗದ ಮೂಲಕ 3-4 ಉಗ್ರರು ಮುಂಬೈ ಪ್ರವೇಶಿಸಲು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. 2011 ರಲ್ಲಿ ಮುಂಬೈ ಮೇಲೆ ಪಾಕ್ ಉಗ್ರರು ದಾಳಿ ನಡೆಸಿದ ರೀತಿಯಲ್ಲೇ ದಾಳಿ ನಡೆಸಲು ಉಗ್ರರು ಸ್ಕೆಚ್ ಹಾಕಿದ್ದಾರೆನ್ನಲಾಗಿದೆ.
ಈ ಹಿನ್ನಲೆಯಲ್ಲಿ ಮುಂಬೈನಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಅದರಲ್ಲೂ ವಿಶೇಷವಾಗಿ ಕರಾವಳಿಯಲ್ಲಿ ಭದ್ರತಾ ಪಡೆ ಹದ್ದಿನಗಣ್ಣಿಟ್ಟಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ