Publish Date: Wed, 15 Feb 2023 (11:22 IST)
Updated Date: Wed, 15 Feb 2023 (11:35 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಕುರಿತು ಸಾಕ್ಷ್ಯಚಿತ್ರ ಹೊರತಂದು ವಿವಾದಕ್ಕೆ ಸಿಲುಕಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದೆಹಲಿ ಹಾಗೂ ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ಸರ್ವೇ ನಡೆಸಲಾಗಿದೆ.
ಬಿಬಿಸಿ (ಬ್ರಿಟಿಷ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್) ಒಳಗೊಂಡಿರುವ ಅಂತಾರಾಷ್ಟ್ರೀಯ ತೆರಿಗೆ ಮತ್ತು ಅಕ್ರಮಗಳ ಆರೋಪದ ಮೇಲೆ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಬಿಬಿಸಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅನೇಕ ಪತ್ರಕರ್ತರ ಮೊಬೈಲ್ ಹಾಗೂ ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಕೇವಲ ಸರ್ವೇ ಅಷ್ಟೆ. ನಮ್ಮ ಅಧಿಕಾರಿಗಳು, ಬಿಬಿಸಿ ಕಚೇರಿಯ ಅಕೌಂಟ್ ಬುಕ್ ಪರಿಶೀಲನೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.