ಬೀದಿಗಳಲ್ಲಿ ನಡೆಯಲು ಅಮಿತ್ ಶಾ ಸಹಿತ ಬಿಜೆಪಿ ನಾಯಕರಿಗೆ ಅಸಾಧ್ಯ : ರಾಹುಲ್ ಗಾಂಧಿ

Webdunia
ಮಂಗಳವಾರ, 31 ಜನವರಿ 2023 (10:42 IST)
ಶ್ರೀನಗರ : ಜಮ್ಮು-ಕಾಶ್ಮೀರದ ಬೀದಿಗಳಲ್ಲಿ ನಡೆಯಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಿತ ಯಾವುದೇ ಬಿಜೆಪಿ ನಾಯಕರಿಗೂ ಸಾಧ್ಯವಿಲ್ಲ. ಏಕೆಂದರೆ ಅವರಿಗೆ ಭಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಶ್ರೀನಗರದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ಸರಿಯಾದ ಕಾನೂನು ಸುವ್ಯವಸ್ಥೆ ಕಾಪಾಡುತ್ತಿದೆ ಎನ್ನುವುದಾದರೆ ಅಮಿತ್ ಶಾ ಜಮ್ಮುವಿನಿಂದ ಶ್ರೀನಗರದ ಲಾಲ್ ಚೌಕ್ವರೆಗೆ ಪಾದಯಾತ್ರೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕಾಗಿ ಅಲ್ಲ. ದೇಶದ ಹಿತಕ್ಕಾಗಿ ಮಾಡಿದ ಯಾತ್ರೆ ಇದು. ದೇಶದ ಅನೇಕತೆ, ಜಾತ್ಯಾತೀತತೆಯನ್ನು ಉಳಿಸಲು ಈ ಯಾತ್ರೆ ಕೈಗೊಂಡೆ. ಪ್ರಜೆಗಳಿಂದ ಸಿಕ್ಕ ಅಭೂತಪೂರ್ವ ಪ್ರತಿಕ್ರಿಯೆ ಕಂಡು ನನ್ನ ಕಣ್ಣಲ್ಲಿ ನೀರು ಬಂದಿದೆ.

ಒಂದು ಹಂತದಲ್ಲಿ ಜೋಡೋ ಯಾತ್ರೆ ಪೂರ್ಣಗೊಳಿಸುವೆನಾ ಎಂಬ ಪ್ರಶ್ನೆ ನನ್ನಲ್ಲಿ ಮೂಡಿತ್ತು. ಮಳೆ, ಚಳಿ ಲೆಕ್ಕಿಸದೇ ಪ್ರಜೆಗಳು ಬಂದಿದ್ದಾರೆ. ಈ ಯಾತ್ರೆಯುದ್ದಕ್ಕೂ ನಾನು ಅನೇಕ ಪಾಠಗಳನ್ನು ಕಲಿತೆ. ಜನರ ದೀನಸ್ಥಿತಿ ಕಂಡು ಟೀಶರ್ಟ್ನಲ್ಲೇ ಯಾತ್ರೆ ಮಾಡಲು ನಿರ್ಣಯಿಸಿದೆ ಎಂದು ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments