ಇದು ದೆಹಲಿಯಲ್ಲಿ ನೆಲೆಕಳೆದುಕೊಳ್ಳುವ ಮುನ್ಸೂಚನೆ: ಆಮ್‌ ಆದ್ಮಿ ಪ್ರಣಾಳಿಕೆಗೆ ಕೌಂಟರ್‌ ಕೊಟ್ಟ ಮೋದಿ

Sampriya
ಬುಧವಾರ, 22 ಜನವರಿ 2025 (15:05 IST)
Photo Courtesy X
ನವದೆಹಲಿ: ದೆಹಲಿ ವಿಧಾನಸಭೆಯ ಚುನಾವಣೆ ಕಾವೇರುತ್ತಿದೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆಯಲಿದೆ. ಫೆಬ್ರುವರಿ 8ರಂದು ಫಲಿತಾಂಶ ಪ್ರಕಟವಾಗಲಿದೆ. ಇದೀಗ ಚುನಾವಣಾ ಆಖಾಢ ರಂಗೇರುತ್ತಿದೆ.

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಮಧ್ಯಮ ವರ್ಗದವರಿಗಾಗಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಆಮ್‌ ಆದ್ಮಿ ಪಕ್ಷವು (ಎಎಪಿ) ದೆಹಲಿಯಲ್ಲಿ ನೆಲೆ ಕಳೆದುಕೊಳ್ಳುತ್ತಿರುವುದರಿಂದ ಇಂತಹ ಘೋಷಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಬಜೆಟ್‌ ಅಧಿವೇಶನವು, ಜನವರಿ 31ರಿಂದ ಏಪ್ರಿಲ್‌ 4ರ ವರೆಗೆ ನಡೆಯಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆಬ್ರುವರಿ 1ರಂದು ಬಜೆಟ್‌ ಮಂಡಿಸಲಿದ್ದಾರೆ. ಏತನ್ಮಧ್ಯೆ, ದೆಹಲಿ ವಿಧಾನಸಭೆ ಚುನಾವಣೆ ಕಾವೇರುತ್ತಿದ್ದು, ಮಧ್ಯಮ ವರ್ಗದ ಜನರಿಗಾಗಿ ಕೆಲವು ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿರಿಸಿದ್ದಾರೆ ಕೇಜ್ರಿವಾಲ್‌. ಶಿಕ್ಷಣ, ಆರೋಗ್ಯಕ್ಕೆ ಆದ್ಯತೆ, ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ರದ್ದು, ಆದಾಯ ತೆರಿಗೆ ಮಿತಿ ಏರಿಕೆ ಸೇರಿದಂತೆ 7 ಅಂಶಗಳು ಅವರ ಬೇಡಿಕೆ ಪಟ್ಟಿಯಲ್ಲಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಕೇಜ್ರಿವಾಲ್‌ ಅವರ ಪಕ್ಷವು ದೆಹಲಿಯಲ್ಲಿ ನೆಲೆ ಕಳೆದುಕೊಳ್ಳುತ್ತಿದೆ. ಹಾಗಾಗಿ, ಸಾಮಾನ್ಯ ಪ್ರಣಾಳಿಕೆ ಬಿಡುಗಡೆಯ ನಂತರವೂ, ನಿಯಮಿತವಾಗಿ ಇಂತಹ ಘೋಷಣೆಗಳನ್ನು ಮಾಡುತ್ತಿದೆ ಎಂದು ಟೀಕಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments