Select Your Language

Notifications

webdunia
webdunia
webdunia
webdunia

ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯಗಳನ್ನು ಪಠ್ಯದಿಂದ ತೆಗೆದು ಹಾಕಿರುವುದು ದುರದೃಷ್ಟಕರ : ನಿತಿನ್ ಗಡ್ಕರಿ

ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯಗಳನ್ನು ಪಠ್ಯದಿಂದ ತೆಗೆದು ಹಾಕಿರುವುದು ದುರದೃಷ್ಟಕರ : ನಿತಿನ್ ಗಡ್ಕರಿ
ನವದೆಹಲಿ , ಭಾನುವಾರ, 18 ಜೂನ್ 2023 (09:23 IST)
ನವದೆಹಲಿ : ಡಾ.ಹೆಡ್ಗೆವಾರ್ ಮತ್ತು ಸ್ವತಂತ್ರ ವೀರ ಸಾವರ್ಕರ್ ಅವರ ಅಧ್ಯಾಯಗಳನ್ನು ಪಠ್ಯಪುಸ್ತಕಗಳಿಂದ ತೆಗೆದು ಹಾಕಿರುವುದು ದುರದೃಷ್ಟಕರ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿಕೆ ನೀಡಿದ್ದಾರೆ.

ಶನಿವಾರ ನಡೆದ ವಿಡಿ ಸಾವರ್ಕರ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಸಭೆಯನ್ನುದ್ದೇಶಿ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಟೀಕಿಸಿದರು. ಅಲ್ಲದೇ ಇದಕ್ಕಿಂತ ನೋವಿನ ಸಂಗತಿ ಇನ್ನೊಂದಿಲ್ಲ ಎಂದರು.

ಕರ್ನಾಟಕ ಸರ್ಕಾರ 6ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಮತ್ತು ಕನ್ನಡ ಪಠ್ಯಪುಸ್ತಕಗಳ ಪರಿಷ್ಕರಣೆಯಲ್ಲಿ ಆರ್ಎಸ್ಎಸ್ ಸಂಸ್ಥಾಪಕ ಹೆಡ್ಗೆವಾರ್ ಮತ್ತು ಹಿಂದುತ್ವದ ಸಿದ್ಧಾಂತವನ್ನು ಹೊಂದಿದ್ದ ವಿಡಿ ಸಾವರ್ಕರ್ ಅವರ ಅಧ್ಯಾಯಗಳನ್ನು ಕೈಬಿಡಲು ಕರ್ನಾಟಕ ಕ್ಯಾಬಿನೆಟ್ ಗುರುವಾರ ಅನುಮೋದನೆ ನೀಡಿದ ಬಳಿಕ ನಿತಿನ್ ಗಡ್ಕರಿ ಈ ಹೇಳಿಕೆ ನೀಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಟ್ ಕಾಯಿನ್ ಹಗರಣ ತನಿಖೆ ಪುನಾರಂಭ ಮಾಡ್ತೀವಿ : ಜಿ.ಪರಮೇಶ್ವರ್