Publish Date: Sun, 25 Sep 2022 (08:04 IST)
Updated Date: Sun, 25 Sep 2022 (08:06 IST)
ಲಕ್ನೋ : 10ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ ಮೇಲೆ ದೇಸೀ ಗನ್ನಿಂದ ಗುಂಡು ಹಾರಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ಶನಿವಾರ ನಡೆದಿದೆ.
10ನೇ ತರಗತಿಯ ವಿದ್ಯಾರ್ಥಿ ಇನ್ನೊಬ್ಬ ವಿದ್ಯಾರ್ಥಿಯೊಂದಿಗೆ ಜಗಳವಾಡಿದ ಬಳಿಕ ಶಿಕ್ಷಕ ಬುದ್ದಿ ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಆತ ಶಿಕ್ಷಕನ ಮೇಲೆ 3 ಬಾರಿ ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಲಕ್ನೋಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕರಿ ರಾಜೀವ್ ದೀಕ್ಷಿತ್ ತಿಳಿಸಿದ್ದಾರೆ.