Select Your Language

Notifications

webdunia
webdunia
webdunia
webdunia

ಜಮ್ಮು-ಕಾಶ್ಮೀರದ ಕುಲ್ಗಾಮ್ ಸೇನಾ ನೆಲೆ ಮೇಲೆ ಉಗ್ರರ ದಾಳಿ: ಓರ್ವ ಯೋಧ ಹುತಾತ್ಮ

ಜಮ್ಮು-ಕಾಶ್ಮೀರದ ಕುಲ್ಗಾಮ್ ಸೇನಾ ನೆಲೆ ಮೇಲೆ ಉಗ್ರರ ದಾಳಿ: ಓರ್ವ ಯೋಧ ಹುತಾತ್ಮ
ಶ್ರೀನಗರ , ಶನಿವಾರ, 3 ಜೂನ್ 2017 (14:12 IST)
ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಹೆದ್ದಾರಿಯಲ್ಲಿರುವ ಕುಲ್ಗಾಮ್‌ನ ಖ್ವಾಜಿಗುಂದ್‌ ಬಳಿಯಿರುವ ಸೇನಾ ನೆಲೆಯನ್ನು ಗುರಿಯಾಗಿರಿಸಿಕೊಂಡು ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು 5 ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
 
ಲೋಯರ್ ಮುಂಡಾದ ಟೋಲ್ ಪೋಸ್ಟ್ ಬಳಿಯಿರುವ ಖ್ವಾಜಿ ಗುಂಡ್ ನ ಸೇನಾ ಸೇನೆ ಮೇಲೆ ಉಗ್ರರು ದಾಳಿ ನಡೆಸಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳು ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
 
ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ  ಸೇನಾ ಪಡೆಗಳು ಜಮಾವಣೆಗೊಂಡಿದ್ದು ಉಗ್ರರಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆದ್ದಾರಿಯ ಸಂಚಾರವನ್ನು ಬಂದ್‌ ಮಾಡಲಾಗಿದೆ. 
 

Share this Story:

Follow Webdunia kannada

ಮುಂದಿನ ಸುದ್ದಿ

ವಿ.ಎಸ್.ಉಗ್ರಪ್ಪನ ಕೃಪೆಯಿಂದ ಸಭಾಪತಿಯಾಗಿಲ್ಲ: ಶಂಕರ್‌ಮೂರ್ತಿ