Webdunia - Bharat's app for daily news and videos

Install App

ಉಗ್ರರಿಗೆ ವೆಪನ್ ಸಾಗಾಟ: ಇಬ್ಬರು ಪೇದೆಗಳು ಸೇರಿ ಮೂವರ ಬಂಧನ

Webdunia
ಬುಧವಾರ, 11 ಅಕ್ಟೋಬರ್ 2017 (16:50 IST)
ನವದೆಹಲಿ: ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಉಗ್ರರಿಗೆ ಮದ್ದುಗುಂಡು ಸರಬರಾಜು ಮಾಡುತ್ತಿದ್ದ ಮೂವರನ್ನು ಜಮ್ಮು ಕಾಶ್ಮೀರ ಪೊಲೀಸರು ಶೋಫಿಯಾನ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ವಿಪರ್ಯಾಸವೆಂದರೆ ಇದರಲ್ಲಿ ಇಬ್ಬರು ಪೊಲೀಸ್ ಪೇದೆಗಳು ಶಾಮೀಲಾಗಿದ್ದಾರೆ.

ಬಂಧಿತ ಪೇದೆಗಳನ್ನು ಶಬೀರ್ ಅಹ್ಮದ್ ಮಲಿಕ್ ಮತ್ತು ನಾಝಿರ್ ಅಹ್ಮದ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಆದಿಲ್  ಅಹ್ಮದ್ ಎನ್ನಲಾಗಿದೆ. ಈ ಮೂವರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯೊಂದಿಗೆ ಸಕ್ರಿಯರಾಗಿದ್ದರು ಎಂದು ತಿಳಿದು ಬಂದಿದೆ.

ಮೂಲಗಳ ಪ್ರಕಾರ ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಸರ್ಕಾರ ನೀಡಿದ್ದ ಮದ್ದುಗುಂಡುಗಳನ್ನು ಉಗ್ರರಿಗೆ ನೀಡಲು ತೆರಳಿದ್ದ ಸಂದರ್ಭದಲ್ಲಿ ಆದಿಲ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ತನ್ನೊಂದಿಗೆ ಶಬೀರ್ ಮತ್ತು ನಾಝಿರ್ ಕೈಜೋಡಿಸಿರುವುದಾಗಿ ಬಾಯ್ಬಿಟ್ಟಿದ್ದಾನೆ. ಆರೋಪಿಗಳಿಂದ ಎಕೆ-47 ರೈಫಲ್ ಬಂದೂಕು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಕುರಿತು ಮತ್ತಷ್ಟು ತೀವ್ರ ವಿಚಾರಣೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments