Select Your Language

Notifications

webdunia
webdunia
webdunia
webdunia

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

Vice President Jagdeep Dhankar, Election Commission of India, Prime Minister Narendra Modi

Sampriya

ನವದೆಹಲಿ , ಬುಧವಾರ, 23 ಜುಲೈ 2025 (18:54 IST)
Photo Credit X
ನವದೆಹಲಿ: ಅನಾರೋಗ್ಯದ ಕಾರಣ ನೀಡಿ ಜಗದೀಪ್ ಧನಕರ್ ಅವರು ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೆ ಆ ಹುದ್ದೆಗೆ ಚುನಾವಣಾ ಪ್ರಕ್ರಿಯೆಯನ್ನು ಭಾರತೀಯ ಚುನಾವಣಾ ಆಯೋಗ ಪ್ರಾರಂಭಿಸಿದೆ.

ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಹೊರಡಿಸಿದ ಗೆಜೆಟ್ ಅಧಿಸೂಚನೆಯ ಮೂಲಕ ಧನಕರ್ ಅವರ ರಾಜೀನಾಮೆ ಅಂಗೀಕರಿಸಿರುವುದನ್ನು ಅಧಿಕೃತವಾಗಿ ತಿಳಿಸಿದೆ. ಈ ಮೂಲಕ ಸಾಂವಿಧಾನಿಕ ಖಾಲಿ ಹುದ್ದೆಯನ್ನು ಭರ್ತಿ ಮಾಡಲು ಚುನಾವಣಾ ಪ್ರಕ್ರಿಯೆಗೆ ದಾರಿ ಮಾಡಿಕೊಟ್ಟಿದೆ.

ಉಪರಾಷ್ಟ್ರಪತಿ ಚುನಾವಣೆಗೆ ಪೂರ್ವಸಿದ್ಧತಾ ಕಾರ್ಯಗಳು ಈಗಾಗಲೇ ಆರಂಭವಾಗಿವೆ ಮತ್ತು ಚುನಾವಣೆಗೆ ಅಧಿಕೃತ ವೇಳಾಪಟ್ಟಿಯನ್ನು ಚುನಾವಣಾ ಪೂರ್ವ ಚಟುವಟಿಕೆಗಳು ಪೂರ್ಣಗೊಂಡ ನಂತರ ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ. ಉಪ ರಾಷ್ಟ್ರಪತಿಯನ್ನು ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಯ್ಕೆ ಮಾಡುತ್ತಾರೆ. ಮೇಲ್ಮನೆಯ ನಾಮನಿರ್ದೇಶಿತ ಸದಸ್ಯರು ಸಹ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.

ಆಡಳಿತರೂಢ ಬಿಜೆಪಿ ನೇತೃತ್ವದ ಎನ್​ಡಿಎ ಲೋಕಸಭೆಯಲ್ಲಿ 293 ಸದಸ್ಯರ ಬೆಂಬಲವನ್ನು ಹೊಂದಿದೆ (542 ಸದಸ್ಯರು) ರಾಜ್ಯಸಭೆಯಲ್ಲಿ 129 ಸದಸ್ಯರ ಬೆಂಬಲವನ್ನು ಹೊಂದಿದೆ. ಇನ್ನು ನಾಮನಿರ್ದೇಶಿತ ಸದಸ್ಯರುಗಳನ್ನು ಸೇರಿಸಿದರೆ, ಆಡಳಿತ ಒಕ್ಕೂಟವು 786 ಸದಸ್ಯರಲ್ಲಿ 422 ಸದಸ್ಯರ ಬೆಂಬಲವನ್ನು ಹೊಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ