ಲಕ್ನೋ : ದ್ವೇಷದ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ಗೆ ಕೋರ್ಟ್ 25 ಸಾವಿರ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.
2019ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಜಂ ಖಾನ್ ದ್ವೇಷದ ಭಾಷಣ ಮಾಡಿದ್ದರು.
ಈ ಆರೋಪದ ಹಿನ್ನೆಲೆಯಲ್ಲಿ ಇಂದು ರಾಂಪುರ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆ) ಮತ್ತು ಜನತಾ ಪ್ರಾತಿನಿಧ್ಯ ಕಾಯಿದೆ 1951ರ ಸೆಕ್ಷನ್ 125ರ ಅಡಿಯಲ್ಲಿ ಅಜಂ ಖಾನ್ ಅವರನ್ನು ದೋಷಿ ಎಂದು ಘೋಷಿಸಲಾಗಿದೆ.