ಜೈಲಿನಲ್ಲಿರುವ ಮಾಜಿ ಐಎಎಸ್‌ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್‌ಗೆ ಸುಪ್ರೀಂನಿಂದ ಕೊನೆಗೂ ಬಿಗ್‌ ರಿಲೀಫ್‌

Sampriya
ಬುಧವಾರ, 21 ಮೇ 2025 (17:43 IST)
Photo Courtesy X
ನವದೆಹಲಿ: ಮಾಡಿದ ತಪ್ಪಿಗಾಗಿ ಜೈಲು ಸೇರಿರುವ ಮಾಜಿ ಐಎಎಸ್‌ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ.

ಖೇಡ್ಕರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಸತೀಶ ಚಂದ್ರ ಅವರಿದ್ದ ಪೀಠ ತನಿಖೆಗೆ ಸಹಕರಿಸುವಂತೆ ಪೂಜಾ ಖೇಡ್ಕರ್‌ ಗೆ ಸೂಚಿಸಿದೆ.

ನಕಲಿ ಪ್ರಮಾಣಪತ್ರ ಬಳಸಿ ನಾಗರಿಕ ಸೇವಾ ಪರೀಕ್ಷೆಯ ಲಾಭ ಪಡೆದುಕೊಂಡ ಆರೋಪ ಪೂಜಾ ಖೇಡ್ಕರ್‌ ಮೇಲಿದೆ. 2023ರ ಬ್ಯಾಚ್‌ನ ಐಎಎಸ್ ಪ್ರೊಬೇಷನರಿ ಅಧಿಕಾರಿಯಾಗಿದ್ದ ಪೂಜಾ ತನ್ನ ಆಯ್ಕೆಗಾಗಿ ಒಬಿಸಿ ಕೋಟಾ ಮತ್ತು ಅಂಗವಿಕಲರ ಕೋಟಾವನ್ನು ದುರುಪಯೋಗಪಡಿಸಿಕೊಂಡು ಸೌಲಭ್ಯಗಳನ್ನು ಪಡೆದಿದ್ದರು ಎಂದು ಆರೋಪಿಸಲಾಗಿದೆ. ಜುಲೈನಲ್ಲಿ ಆಕೆಯ ವಿರುದ್ದ ದೆಹಲಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಗರಂ ಆದ ಘಟನೆಯೂ ನಡೆಯಿತು. ಆಕೆ ಮಾಡಿದ ಘೋರ ಅಪರಾಧವೇನು? ಅವರು ಡ್ರಗ್ಸ್ ಮಾರಾಟಗಾರ್ತಿಯೇ? ಅಥವಾ ಭಯೋತ್ಪಾದಕಿಯೇ? ಆಕೆ ಏನಾದರೂ ಕೊಲೆ ಮಾಡಿದ್ದಾಳೆಯೇ? ಎನ್‌ಡಿಪಿಎಸ್‌ ಕಾಯ್ದೆಯಡಿ ಅವರ ಬಂಧನವಾಗಿಲ್ಲ, ನೀವು ತನಿಖೆ ಪೂರ್ಣಗೊಳಿಸಿ. ಎಲ್ಲವನ್ನು ಕಳೆದುಕೊಂಡಿರುವ ಆಕೆಗೆ ಎಲ್ಲಿಯೂ ಕೆಲಸ ಸಿಗುತ್ತಿಲ್ಲ ಎಂದು ಪೀಠ ಹೇಳಿದೆ.

ಪೂಜಾ ಖೇಡ್ಕರ್‌ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದಕ್ಕೆ ದೆಹಲಿ ಪೊಲೀಸರು ಮತ್ತು ಯುಪಿಎಸ್‌ಸಿ ವಿರೋಧ ವ್ಯಕ್ತಪಡಿಸಿವೆ. ಆಕೆ ಆಯೋಗ ಮತ್ತು ಜನರನ್ನು ವಂಚಿಸಿದ್ದಾಳೆ. ಆಕೆ ತನಿಖೆಯಲ್ಲಿ ಸಹಕರಿಸುತ್ತಿಲ್ಲ ಮತ್ತು ಅವರ ವಿರುದ್ಧದ ಆರೋಪಗಳು ಗಂಭೀರವಾಗಿವೆ ಎಂದು ಸುಪ್ರೀಂ ಕೋರ್ಟ್ ಗೆ ತಕರಾರು ಸಲ್ಲಿಸಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಆರೆಸ್ಸೆಸ್ ಬೆದರಿಕೆ ಕರೆ ಎಂದು ತೋರಿಸಿದ ಪ್ರಿಯಾಂಕ್ ಖರ್ಗೆಗೆ ನಿಮ್ಮ ನಂಬರ್ ಸುಲಭಕ್ಕೆ ಸಿಗುತ್ತಾ ಎಂದು ಪ್ರಶ್ನಿಸಿದ ಪಬ್ಲಿಕ್

ಆರೆಸ್ಸೆಸ್ ನಿಷೇಧಿಸಲು ಕಾಂಗ್ರೆಸ್ ನಿಂದ ಸಾಧ್ಯವಿಲ್ಲ: ವಿಜಯೇಂದ್ರ

ಮುಂದಿನ ಸುದ್ದಿ
Show comments