Publish Date: Sun, 28 Jul 2019 (10:01 IST)
Updated Date: Sun, 28 Jul 2019 (10:03 IST)
ನವದೆಹಲಿ: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಜೈಪಾಲ್ ರೆಡ್ಡಿ ಇಂದು ಬೆಳಿಗ್ಗೆ ಹೈದರಾಬಾದ್ ನಲ್ಲಿ ಕೊನೆಯುಸಿರೆಳೆದಿದ್ದಾರೆ.
ಅವರಿಗೆ 77 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ನ್ಯುಮೋನಿಯಾ ಪೀಡಿತರಾಗಿದ್ದರು ಎನ್ನಲಾಗಿದೆ. ಜೈಪಾಲ್ ರೆಡ್ಡಿಗೆ ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯಿದ್ದಾರೆ.
ಐಕೆ ಗುಜ್ರಾಲ್ ಸಂಪುಟದಲ್ಲಿ ಮತ್ತು ಮನಮೋಹನ್ ಸಿಂಗ್ ಅಧಿಕಾರಾವಧಿಯಲ್ಲಿ ಜೈಪಾಲ್ ರೆಡ್ಡಿ ಕೇಂದ್ರ ಸಚಿವರಾಗಿ ಕೆಲಸ ಮಾಡಿದ್ದರು. ಅವರ ನಿಧನಕ್ಕೆ ಕಾಂಗ್ರೆಸ್, ಬಿಜೆಪಿ ಸೇರಿದಂತೆ ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.