ಜಲ್ಲಿಕಟ್ಟುಗೆ ಶಾಶ್ವತ ಪರಿಹಾರ ಬೇಕೆಂದು ಆಗ್ರಹಿಸಿ ಮರೀನಾ ಬೀಚ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದ್ದು, ಚೆನ್ನೈ ಮಹಾನಗರದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ.
ವಿದ್ಯಾರ್ಥಿಗಳು ನಡೆಸುತ್ತಿದ್ದ ಅಹೋರಾತ್ರಿ ಧರಣಿಯನ್ನು ಹತ್ತಿಕಿಸಲು ಯತ್ನಿಸಿದ ಪೊಲೀಸರ ವಿರುದ್ಧ ಸಮರ ಸಾರಿರುವ ಹೋರಾಟಗಾರರು, ಐಸ್‌ಹೌಸ್ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚೈನ್ನೈ ಮಹಾನಗರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ಎಲ್ಲೆಲ್ಲೂ ಲಾಠಿ ಚಾರ್ಚ್, ನಾಗರಿಕರು ಹಾಗೂ ಪೊಲೀಸರ ನಡುವೆ ಸಂಘರ್ಷ ನಡೆದಿದ್ದು, ಮುಂಜಾಗ್ರತ ಕ್ರಮವಾಗಿ ಬಸ್ ಹಾಗೂ ಲೋಕಲ್ ಟ್ರೈನ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ನಗರದಲ್ಲಿ ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳು ಬಂದ್ ಮಾಡಲಾಗಿದ್ದು, ರಾಯಪೇಟೆ, ಟ್ರಿಪ್ಲಿಕೇನ್ ಹಾಗೂ ಮೈಲಾಪೂರ ಪ್ರದೇಶದಲ್ಲಿ ಬೀಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.