Publish Date: Sat, 13 May 2017 (19:02 IST)
Updated Date: Sat, 13 May 2017 (19:05 IST)
ಜಮ್ಮು ಕಾಶ್ಮಿರದಲ್ಲಿ ಐವರು ಲಷ್ಕರ್ ಭಯೋತ್ಪಾದಕರನ್ನು ಪೊಲೀಸರು ಬಂಧಿಸಿ ಅವರ ಬಳಿಯಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಉಗ್ರರು ಅಡಗಿದ್ದಾರೆ ಎನ್ನುವ ಮಾಹಿತಿ ಪಡೆದ ಪೊಲೀಸರು, ಸೇನೆಯ ನೆರವಿನಿಂದ ಉಗ್ರರು ಅಡಗಿದ್ದ ಪ್ರದೇಶವನ್ನು ಸುತ್ತುವರಿದಾಗ ಉಗ್ರರು ಶರಣಾಗಿದ್ದಾರೆ.
ಜಮ್ಮು ಕಾಶ್ಮಿರದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗುವ ಬಗ್ಗೆ ಭಯೋತ್ಪಾದಕರು ಸಂಚು ರೂಪಿಸಿದ್ದರು. ಸೇನಾನೆಲೆಗಳ ಮೇಲೆ ಕೂಡಾ ದಾಳಿ ಮಾಡುವ ಬಗ್ಗೆ ರಣತಂತ್ರ ರೂಪಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.