Select Your Language

Notifications

webdunia
webdunia
webdunia
webdunia

Jammu, Kashmir: ಭಯೋತ್ಪಾದಕರ ವಿರುದ್ಧದ ಕಾರ್ಯಚರಣೆಯಲ್ಲಿ ಇಬ್ಬರು ಸೈನಿಕರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರ ಎನ್‌ಕೌಂಟರ್

Sampriya

ಶ್ರೀನಗರ , ಸೋಮವಾರ, 8 ಸೆಪ್ಟಂಬರ್ 2025 (19:55 IST)
ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಇಂದು (ಸೋಮವಾರ) ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಸಂದರ್ಭದಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಇನ್ನೂ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕುಲ್ಗಾಮ್‌ನ ಗುಡರ್‌ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಗುಪ್ತಚರ ಮಾಹಿತಿಯ ಮೇರೆಗೆ ಭದ್ರತಾ ಪಡೆ, ಜಮ್ಮು ಕಾಶ್ಮೀರ ಪೊಲೀಸ್ ಮತ್ತು ಸಿಆರ್‌ಪಿಎಫ್‌ ಅರೆಸೈನಿಕ ಪಡೆಯು ಜಂಟಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿತ್ತು.

ಈ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತಿದಾಳಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಗಿದ್ದು, ಅಧಿಕಾರಿ ಸೇರಿದಂತೆ ಮೂವರು ಸೈನಿಕರು ಗಾಯಗೊಂಡಿದ್ದರು. ಗಾಯಗೊಂಡ ಸೈನಿಕರನ್ನು ತಕ್ಷಣವೆ ಸೈನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಂಭೀರ ಗಾಯದಿಂದ ಇಬ್ಬರು ಸೈನಿಕರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಮೃತಪಟ್ಟ ಭಯೋತ್ಪಾದಕರ ಗುರುತು ಪತ್ತೆಯಾಗಿಲ್ಲ. ಆದರೆ ಅವರು ವಿದೇಶಿ ಪ್ರಜೆಗಳೆಂದು ನಂಬಲಾಗಿದೆ. ಸದ್ಯ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದ್ದೂರು ಹಿಂಸಚಾರದಲ್ಲಿ ತಪ್ಪಿತಸ್ಥರ ಸದೆ ಖಂಡಿತಾ: ಶಾಸಕ ಉದಯ