Jammu, Kashmir: ಭಯೋತ್ಪಾದಕರ ವಿರುದ್ಧದ ಕಾರ್ಯಚರಣೆಯಲ್ಲಿ ಇಬ್ಬರು ಸೈನಿಕರು ಹುತಾತ್ಮ

Sampriya
ಸೋಮವಾರ, 8 ಸೆಪ್ಟಂಬರ್ 2025 (19:55 IST)
ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಇಂದು (ಸೋಮವಾರ) ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಸಂದರ್ಭದಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಇನ್ನೂ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕುಲ್ಗಾಮ್‌ನ ಗುಡರ್‌ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಗುಪ್ತಚರ ಮಾಹಿತಿಯ ಮೇರೆಗೆ ಭದ್ರತಾ ಪಡೆ, ಜಮ್ಮು ಕಾಶ್ಮೀರ ಪೊಲೀಸ್ ಮತ್ತು ಸಿಆರ್‌ಪಿಎಫ್‌ ಅರೆಸೈನಿಕ ಪಡೆಯು ಜಂಟಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿತ್ತು.

ಈ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತಿದಾಳಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಗಿದ್ದು, ಅಧಿಕಾರಿ ಸೇರಿದಂತೆ ಮೂವರು ಸೈನಿಕರು ಗಾಯಗೊಂಡಿದ್ದರು. ಗಾಯಗೊಂಡ ಸೈನಿಕರನ್ನು ತಕ್ಷಣವೆ ಸೈನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಂಭೀರ ಗಾಯದಿಂದ ಇಬ್ಬರು ಸೈನಿಕರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಮೃತಪಟ್ಟ ಭಯೋತ್ಪಾದಕರ ಗುರುತು ಪತ್ತೆಯಾಗಿಲ್ಲ. ಆದರೆ ಅವರು ವಿದೇಶಿ ಪ್ರಜೆಗಳೆಂದು ನಂಬಲಾಗಿದೆ. ಸದ್ಯ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಾಲಕ್ಷ್ಮೀ ಲೇಔಟ್‍ನ ಕಂಠೀರವ ಸ್ಟುಡಿಯೋ ಬಳಿ ರಸ್ತೆ ತಡೆ ಚಳವಳಿ

ಬಿಪಿಎಲ್ ಕಾರ್ಡ್ ದಾರರು ತಪ್ಪದೇ ಗಮನಿಸಿ: ಈ ನೋಟಿಸ್ ಬಂದರೆ ಸುಮ್ಮನೇ ಕೂರಬೇಡಿ

ಬಿಜೆಪಿ ಭಯಕ್ಕೇ ರಾಜ್ಯ ಸರ್ಕಾರ ಕ್ರಿಶ್ಚಿಯನ್ ಉಪಜಾತಿಗಳಿಗೆ ಕೊಕ್ ಕೊಟ್ಟಿದೆ: ವಿಜಯೇಂದ್ರ

ಜಾತಿ ಗಣತಿ ಮಾಡುವಾಗ ಯಾವೆಲ್ಲಾ ಪ್ರಶ್ನೆ ಕೇಳಬಹುದು ಇಲ್ಲಿ ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments