Webdunia - Bharat's app for daily news and videos

Install App

ಜಯಾ, ಕರುಣಾ ಆರೋಗ್ಯದಲ್ಲಿ ಚೇತರಿಕೆ

Webdunia
ಗುರುವಾರ, 27 ಅಕ್ಟೋಬರ್ 2016 (16:23 IST)
ಅನಾರೋಗ್ಯಕ್ಕೀಡಾಗಿ ಆಸ್ಪತ್ರೆ ಸೇರಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಮತ್ತು ವಿರೋಧ ಪಕ್ಷ ಡಿಎಂಕೆ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಎಮ್. ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಎರಡು ಪಕ್ಷಗಳ ಮೂಲಗಳು ತಿಳಿಸಿವೆ.
 
ಎಐಡಿಎಂಕೆ ವರಿಷ್ಠೆ ಜಯಾ (68) ಕಳೆದ ತಿಂಗಳ 22 ರಂದು ಜ್ವರ ಮತ್ತು ನಿರ್ಜಲೀಕರಣ ಸಮಸ್ಯೆಯಿಂದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಅವರ ಆರೋಗ್ಯದಲ್ಲಿ ಬಹಳಷ್ಟು ಸುಧಾರಣೆಯಾಗಿದ್ದು ನವೆಂಬಕ್ 18 ರಂದು ಅರವಕುರಿಚಿ, ತಂಜಾವೂರ್ ಮತ್ತು ತಿರುಪರನ್‌ಕುಂದರಮ್‌ನಲ್ಲಿ ನಡೆಯಲಿರುವ ಪಕ್ಷದ ಚುನಾವಣಾ ಡ್ಯೂಟಿಗೆ 18 ಸಚಿವರ ನೇಮಕಕ್ಕೆ  ಬುಧವಾರ ಅನುಮೋದನೆ ನೀಡಿದ್ದಾರೆ. ದೀಪಾವಳಿಗೆ ಅವರು ತಮ್ಮ ನಿವಾಸಕ್ಕೆ ಮರಳಲಿದ್ದಾರೆ ಎಂದು ಹೇಳಲಾಗುತ್ತಿದೆ. 
 
92 ವರ್ಷದ ಡಿಎಂಕೆ ನಾಯಕ ಕರುಣಾನಿಧಿ ಔಷಧವೊಂದರ ಅಲರ್ಜಿಯಿಂದ ಕಳೆದೆರಡು ದಿನಗಳ ಹಿಂದೆ ಆಸ್ಪತ್ರೆ ಸೇರಿದ್ದರು. ಅವರಿಗೆ ಇನ್ನು ಕೆಲವು ದಿನಗಳ ವಿಶ್ರಾಂತಿಗೆ ಸೂಚಿಸಲಾಗಿದೆ. ಅವರು ಕೆಲ ದಿನಗಳಿಂದ ಬಳಸುತ್ತಿದ್ದ ಔಷಧಿಯಿಂದ ಈ ಅಲರ್ಜಿ ಉಂಟಾಗಿದ್ದು ಅವರನ್ನು ಭೇಟಿಯಾಗಲು ಬರಲು ಕಾರ್ಯಕರ್ತರಿಗೂ ಅವಕಾಶ ನೀಡುತ್ತಿಲ್ಲ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments