Webdunia - Bharat's app for daily news and videos

Install App

ಜಯಾ ಆರೋಗ್ಯ ಸ್ಥಿತಿ ಇಂದು ಬಹಿರಂಗ

Webdunia
ಬುಧವಾರ, 5 ಅಕ್ಟೋಬರ್ 2016 (09:36 IST)
ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆರೋಗ್ಯದ ಬಗ್ಗೆ ಕಳೆದ ಹಲವು ದಿನಗಳಿಂದ ಎದ್ದಿರುವ ಊಹಾಪೋಹಗಳಿಗೆ ಇಂದು ತೆರೆ ಬೀಳಲಿದೆ. ಜಯಾ ಆರೋಗ್ಯದ ಬಗ್ಗೆ ಅಧಿಕೃತ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿನ್ನೆ ಹೈಕೋರ್ಟ್ ಆದೇಶಿಸಿದ್ದು ಇಂದು ಸತ್ಯ ಬಹಿರಂಗವಾಗಲಿದೆ.
ಜಯಾ ದೇಹ ಸ್ಥಿತಿ ಬಗ್ಗೆ ಊಹಾಪೋಹಗಳು ಎದ್ದಿರುವ ಹಿನ್ನೆಲೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡುವಂತೆ ಟ್ರಾಫಿಕ್ ರಾಮಸ್ವಾಮಿ ಕೋರ್ಟ್ ಮೆಟ್ಟಿಲೇರಿದ್ದರು. ಜಯಾ ಆರೋಗ್ಯ ಹೇಗಿದೆ? ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ? ಅವರು ತಮ್ಮ ಸಚಿವ ಸಂಪುಟದ ಸದಸ್ಯರನ್ನು ಭೇಟಿಯಾಗಿದ್ದಾರೆಯೇ? ಅವರು ಆಸ್ಪತ್ರೆಯಲ್ಲಿರುವ ಫೋಟೋವನ್ನು ಬಿಡುಗಡೆ ಮಾಡಿ ಎಂದು ರಾಮಸ್ವಾಮಿ ಅರ್ಜಿಯಲ್ಲಿ ಕೇಳಿಕೊಂಡಿದ್ದರು.
 
ಮಂಗಳವಾರ  ರಾಮಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಆಸ್ಪತ್ರೆಯಿಂದ ಮಾಹಿತಿ ಕಲೆ ಹಾಕಿ ಏನಾಗಿದೆ ಎಂಬುದನ್ನು  ಕೋರ್ಟ್ ಮೂಲಕ ಬುಧವಾರದೊಳಗೆ ಬಹಿರಂಗ ಪಡಿಸಿ ಎಂದು ತಮಿಳುನಾಡು ಸರ್ಕಾರಕ್ಕೆ ತಾಕೀತು ಮಾಡಿತ್ತು .
 
ಜಯಲಲಿತಾ ಕಳೆದ ಸೆಪ್ಟೆಂಬರ್ 22 ರಂದು ನಿರ್ಜಲೀಕರಣ ಮತ್ತು ಜ್ವರದ ಬಾಧೆಗೊಳಗಾಗಿ ಚೆನ್ನೈನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು, ಕೆಲವು ದಿನಗಳ ಮಟ್ಟಿಗೆ ಅವರನ್ನು ನಿಗಾವಣೆಯಲ್ಲಿ ಇಡಲಾಗುವುದು ಎಂದು ಆಸ್ಪತ್ರೆ ಸೆಪ್ಟೆಂಬರ್ 23 ರಿಂದ ಪತ್ರಿಕಾ ಹೇಳಿಕೆಯನ್ನು ನೀಡುತ್ತಲೇ ಬಂದಿದೆ. ಆದರೆ ಅವರ ಆರೋಗ್ಯದ ಕುರಿತಾದ ಯಾವುದೇ ನಂಬಲರ್ಹ ವರದಿಯನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್ ಹಂತಕಿ ಸೋನಂ ರಘುವಂಶಿಯ ಮತ್ತೊಂದು ಸೀಕ್ರೆಟ್ ಬಯಲು

ನಾನೇನು ಮಾಡ್ತೀನಿ ಎಂದು ಯಾರಿಗೂ ಗೊತ್ತಿಲ್ಲ: ಇರಾನ್ ಗೆ ಡೊನಾಲ್ಡ್ ಟ್ರಂಪ್ ವಾರ್ನ್

ನಾನೇನು ಆಟ ಆಟಕ್ಕೆ ಹೋಗಿದ್ನಾ: ಅಮೆರಿಕಾಗೆ ನೋ ಎಂದ ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ

Viral video: ಮಾಂಗಲ್ಯ ಸರ ತೆಗೆಯಲು ಬಂದ ವೃದ್ಧ ದಂಪತಿ: ನೆಟ್ಟಿಗರ ಮನಗೆದ್ದ ಅಂಗಡಿ ಮಾಲಿಕ

ಕೆಲಸದ ಅವಧಿ ಹೆಚ್ಚಳ: 10 ಗಂಟೆ ಕೆಲಸ ಮಾಡಿ ಅಂದ್ರೆ ಫ್ಯಾಮಿಲಿ ಏನು ಮಾಡ್ಬೇಕು

ಮುಂದಿನ ಸುದ್ದಿ
Show comments