ಆಂಬ್ಯುಲೆನ್ಸ್ ನಲ್ಲಿದ್ದ ಜಯಲಲಿತಾ ಇದ್ದಕ್ಕಿದ್ದಂತೆ ಎಚ್ಚರವಾಗಿದ್ದರಂತೆ!

Webdunia
ಬುಧವಾರ, 21 ಮಾರ್ಚ್ 2018 (10:23 IST)
ಚೆನ್ನೈ: ಜಯಲಲಿತಾ ಸಾವಿನ ನಿಗೂಢತೆಯನ್ನು ತನಿಖೆ ನಡೆಸಲು ನಿಯೋಜಿಸಿದ್ದ ತನಿಖಾಧಿಕಾರಿಗಳ ಮುಂದೆ ಶಶಿಕಲಾ ನಟರಾಜನ್ ಕೆಲವೊಂದು ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ.
 

ತಮ್ಮ ಪೊಯೆಸ್ ಗಾರ್ಡನ್ ನಿವಾಸದ ಶೌಚಾಲಯದಲ್ಲಿ ಜಯಲಲಿತಾ ಕುಸಿದು ಬಿದ್ದಿದ್ದರು. ತಕ್ಷಣ ಅವರು ನನ್ನ ಕೂಗಿದರು. ಅಲ್ಲಿಗೆ ಹೋದಾಗಲೂ ಆಸ್ಪತ್ರೆಗೆ ಹೋಗುವುದು ಬೇಡ ಎಂದೇ  ಅವರು ಹೇಳಿದ್ದರು. ಆದರೆ ನಾನು ತಕ್ಷಣ ವೈದ್ಯರಿಗೆ ಕರೆ ಮಾಡಿ ಆಂಬ್ಯುಲೆನ್ಸ್ ತರಲು ಹೇಳಿದೆ.

ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಜಯಲಲಿತಾಗೆ ಒಮ್ಮೆ ಎಚ್ಚರವಾಗಿತ್ತು. ಅವರು ಎದ್ದು ನನ್ನನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೀರಾ ಎಂದು ಪ್ರಶ್ನಿಸಿದ್ದರು. ಆಸ್ಪತ್ರೆಯಲ್ಲಿದ್ದಷ್ಟು ದಿನಗಳಲ್ಲಿ ಮೂರು ಬಾರಿ ಅವರ ವಿಡಿಯೋ ಮಾಡಲಾಗಿತ್ತು. ಒ ಪನೀರ್ ಸೆಲ್ವಂ ಮತ್ತು ತಂಬಿದೊರೈಗೆ ಜಯಲಲಿತಾ ಭೇಟಿಗೆ ಅವಕಾಶ ಮಾಡಲಾಗಿತ್ತು ಎಂದು ಶಶಿಕಲಾ ತನಿಖಾಧಿಕಾರಿಗಳ ಮುಂದೆ ಹೇಳಿದ್ದಾರೆ ಎನ್ನಲಾಗಿದೆ.  ಆದರೆ ಪನೀರ್ ಸೆಲ್ವಂ ಮತ್ತು ತಂಬಿದೊರೈ ನಮಗೆ ಜಯಲಲಿತಾ ಭೇಟಿ ಮಾಡಲು ಅವಕಾಶ ನೀಡಲಾಗಿಲ್ಲ ಎಂದು ಆಪಾದಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments