Webdunia - Bharat's app for daily news and videos

Install App

ಚಿಕಿತ್ಸೆಗೆ ಸ್ಪಂದಿಸದ ಜಯಾ: ಆಸ್ಪತ್ರೆಯಲ್ಲಿ ಕಣ್ಣೀರಿಡುತ್ತಿರುವ ಪನ್ನೀರ್ ಸೆಲ್ವಂ, ಶಶಿಕಲಾ

Webdunia
ಸೋಮವಾರ, 5 ಡಿಸೆಂಬರ್ 2016 (16:23 IST)
ಹೃದಯಾಘಾತಕ್ಕೊಳಗಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಕೋಮಾ ಸ್ಥಿತಿಗೆ ತಲುಪಿರುವ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಆಸ್ಪತ್ರೆಯ ಹೊರಗೆ ಸೇರಿರುವ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಜಯಾ ಭಾವಚಿತ್ರವನ್ನು ಹಿಡಿದುಕೊಂಡು ಗೋಳಾಡುತ್ತಿದ್ದರೆ, ಹಣಕಾಸು ಸಚಿವ, ಜಯಾ ಬಲಗೈ ಬಂಟ ಪನ್ನಿರ್ ಸೆಲ್ವಂ ಮತ್ತು ಆಪ್ತ ಗೆಳತಿ ಶಶಿಕಲಾ ಆಸ್ಪತ್ರೆಯಲ್ಲಿ ಕಣ್ಣೀರು ಸುರಿಸುತ್ತಿದ್ದಾರೆ. 
ಜಯಾ ಆರೋಗ್ಯದ ಬಗ್ಗೆ ಅಪೋಲೋ ಆಸ್ಪತ್ರೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದ್ದು, ಸಿಎಂ ಆರೋಗ್ಯ ಮತ್ತಷ್ಟು ಬಿಗಡಾಯಿಸಿದೆ. ಕ್ಷಣಕ್ಷಣಕ್ಕೂ ಅವರ ಸ್ಥಿತಿ ಗಂಭೀರವಾಗುತ್ತಿದೆ ಎಂದು ಹೇಳಿದೆ.
 
ಜೀವ ರಕ್ಷಕವನ್ನು ಅಳವಡಿಸಿ ಜಯಾರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರನ್ನು ದಾಖಲಿಸಿಲಾಗಿರುವ ಚೆನ್ನೈನ ಅಪೋಲೋ ಆಸ್ಪತ್ರೆ ಮುಂದೆ ಸಾವಿರಾರು ಅಭಿಮಾನಿಗಳು ಗೋಳಾಡುತ್ತಿದ್ದಾರೆ. ಆಸ್ಪತ್ರೆ ಮುಂದೆ ಸೇರುತ್ತಿರುವ ಸಿಎಂ ಅಭಿಮಾನಿಗಳ ಸಂಖ್ಯೆ ಕ್ಷಣಕ್ಷಣಕ್ಕೂ ಹೆಚ್ಚುತ್ತಿದ್ದು, ಆಸ್ಪತ್ರೆಗೆ ಬರುತ್ತಿರುವ ಅಂಬುಲೆನ್ಸ್ ಸಂಚಾರಕ್ಕೂ ಅಡ್ಡಿಯುಂಟಾಗಿದೆ. ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಬಂದ್ ಮಾಡಲಾಗಿದೆ. 
 
ಜಯಾಗೆ ಹೆಚ್ಚಿನ ಚಿಕಿತ್ಸೆ ನೀಡಲು ದೆಹಲಿಯ ಏಮ್ಸ್‌ನಿಂದ ತಜ್ಞ ವೈದ್ಯರು ಚೈನ್ನೈಗೆ ಆಗಮಿಸುತ್ತಿದ್ದು ಕೆಲವೇ ಕ್ಷಣಗಳಲ್ಲಿ ಅಪೋಲೋ ಆಸ್ಪತ್ರೆಯನ್ನು ತಲುಪಲಿದ್ದಾರೆ.
 
ಸೆಪ್ಟೆಂಬರ್ 23 ರಂದು ಜ್ವರ ಮತ್ತು ನಿರ್ಜಲೀಕರಣ ಸಮಸ್ಯೆಯಿಂದ ಅಪೋಲೋ ಆಸ್ಪತ್ರೆ ಸೇರಿದ್ದ ಜಯಾ ನಿನ್ನೆ ಸಂಜೆ ಹೃದಯಾಘಾತಕ್ಕೊಳಗಾಗಿದ್ದರು. 
 
ತಮಿಳುನಾಡಿನ ಎಲ್ಲ ರಾಜಕೀಯ ಪಕ್ಷದ ನಾಯಕರು ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದು, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಸಹ ಚೆನ್ನೈ ಕಡೆಗೆ ಹೊರಟಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments