Select Your Language

Notifications

webdunia
webdunia
webdunia
webdunia

ಚಿಕಿತ್ಸೆಗೆ ಸ್ಪಂದಿಸುತ್ತಿರುವ ಜಯಲಲಿತಾ, ಶೀಘ್ರದಲ್ಲೇ ಡಿಸ್ಚಾರ್ಜ್

ಚಿಕಿತ್ಸೆಗೆ ಸ್ಪಂದಿಸುತ್ತಿರುವ ಜಯಲಲಿತಾ, ಶೀಘ್ರದಲ್ಲೇ ಡಿಸ್ಚಾರ್ಜ್
ಚೆನ್ನೈ , ಮಂಗಳವಾರ, 27 ಸೆಪ್ಟಂಬರ್ 2016 (16:13 IST)
ಜ್ವರ ಮತ್ತು ನಿರ್ಜಲೀಕರಣಕ್ಕೊಳಗಾಗಿ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಶೀಘ್ರದಲ್ಲಿಯೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಸ್ಪಷ್ಟಪಡಿಸಿವೆ. ಜತೆಗೆ ಹೆಚ್ಚಿನ ಚಿಕಿತ್ಸೆಗಾಗಿ ಅವರು ವಿದೇಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂಬ ವದಂತಿಗಳನ್ನು ಅಲ್ಲಗಳೆದಿವೆ. 

ಜಯಲಲಿತಾ ಅವರಿಗೆ ವಿಶ್ರಾಂತಿಯ ಅಗತ್ಯವಿದ್ದು ಕೆಲವೇ ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಮತ್ತು ತಮ್ಮ ಕಾರ್ಯಾಲಯವನ್ನು ಸಂಭಾಳಿಸಲಿದ್ದಾರೆ ಎಂದು ಅಪೋಲೋ ಆಸ್ಪತ್ರೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸುಬ್ಬಯ್ಯ ವಿಶ್ವನಾಥನ್ ತಿಳಿಸಿದ್ದಾರೆ. 
 
ಜ್ವರ ಹಾಗೂ ನಿರ್ಜಲೀಕರಣದಿಂದ ಬಳಲುತ್ತಿದ್ದ ಜಯಲಲಿತಾ ಸೆಪ್ಟೆಂಬರ್ 22ರಂದು ನಗರದಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರು ಕಿಡ್ನಿ ಸಮಸ್ಯೆ ಮತ್ತು ಅಧಿಕ ಮಧುಮೇಹದಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗೆ ಸಿಂಗಾಪುರಕ್ಕೆ ತೆರಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಅವರು ವಿದೇಶಕ್ಕೆ ಹೋಗುತ್ತಿರುವ ಸುದ್ದಿ ಕೇವಲ ವದಂತಿ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರೇ ಖಚಿತ ಪಡಿಸಿದ್ದಾರೆ. 
 

Share this Story:

Follow Webdunia kannada

ಮುಂದಿನ ಸುದ್ದಿ

ಸುಪ್ರೀಂಕೋರ್ಟ್ ಆದೇಶಕ್ಕೆ ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ