Webdunia - Bharat's app for daily news and videos

Install App

ಜಯಲಲಿತಾರ ಕೊಡನಾಡ್ ಎಸ್ಟೇಟ್ ನಲ್ಲಿ 4ನೇ ಸಾವು: ಅಕೌಂಟಂಟ್ ಶವ ಪತ್ತೆ

Webdunia
ಮಂಗಳವಾರ, 4 ಜುಲೈ 2017 (11:13 IST)
ಊಟಿ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜೆ. ಜಯಲಲಿತಾ ಅವರ ಒಡೆತನದ ಕೊಡನಾಡ್‌ ಎಸ್ಟೇಟ್‌ನಲ್ಲಿನ ನಿಗೂಢ ಸಾವಿನ ಸರಣಿ ಮುಂದುವರೆದಿದ್ದು, ಎಸ್ಟೇಟ್ ಗೆ ಸೇರಿದ ಅಕೌಂಟಂಟ್‌ ದಿನೇಶ್‌ ಕುಮಾರ್‌ (28ವರ್ಷ)  ಎಂಬುವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
 
ಈ ಮೂಲಕ ಕೊಡನಾಡ್‌ ಎಸ್ಟೇಟ್‌ ನಲ್ಲಿ ಸಂಭವಿಸಿರುವ ಸಾವಿನ ಸಂಖ್ಯೆ 4ಕ್ಕೇರಿಕೆಯಾಗಿದೆ. ಜಯಲಲಿತಾ ಅವರು ಕೊಡನಾಡ್‌ ಎಸ್ಟೇಟ್‌ ನ ಮೂರು ಮಂದಿ ಅಕೌಂಟೆಂಟ್‌ ಗಳ ಪೈಕಿ  ದಿನೇಶ್‌ ಕೂಡಾ ಒಬ್ಬರಾಗಿದ್ದರು. ದಿನೇಶ್ ಅವರ ಶವ ಕೊಥಗಿರಿಯ ಅವರ ನಿವಾಸದಲ್ಲಿ ಫ್ಯಾನ್‌ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಹೇಳಲಾಗಿದೆ.
 
ಈ ಕುರಿತು ಊಟಿ ಎಸ್ ಪಿ ಮುರಳಿ ರಂಬಾ ಪ್ರತಿಕ್ರಿಯಿಸಿದ್ದು, ಕಳೆದ 15 ದಿನಗಳಿಂದ ಅಕೌಂಟೆಂಟ್ ದಿನೇಶ್ ಕೆಲಸಕ್ಕೆ ಹೋಗಿರಲಿಲ್ಲ. ಅನಾರೋಗ್ಯದ ಕಾರಣದಿಂದ ರಜೆಯಲ್ಲಿದ್ದ ಎಂದು ತಿಳಿಸಿದ್ದಾರೆ.  ಇನ್ನು ದಿನೇಶ್ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಅವರ ತಾಯಿ ಹಾಗೂ ತಂಗಿ ಮೊದಲು ನೋಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತಾದರೂ ಅಷ್ಚು ಹೊತ್ತಿಗಾಗಲೇ ದಿನೇಶ್ ಸಾವನ್ನಪ್ಪಿದ್ದ ಎಂದು ವೈದ್ಯರು  ತಿಳಿಸಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸ್ ಪೇದೆಯ ಬರ್ತಡೇ ಪಾರ್ಟಿಯಲ್ಲಿ ಡಾನ್ಸರ್‌ನ್ನು ತಬ್ಬಿ ಕುಣಿದಾಡಿದ ಎಎಸ್‌ಐ, ವೈರಲ್ ವಿಡಿಯೋ

ಅಕ್ರಮ ಹಣ ವರ್ಗಾವಣೆ: ಸತೀಶ್ ಸೈಲ್‌ 2 ದಿನ ಇಡಿ ಕಸ್ಟಡಿಗೆ

ನೇಪಾಳದಲ್ಲಿ ಸಿಲುಕಿದ ಕನ್ನಡಿಗರೆಲ್ಲರೂ ಸುರಕ್ಷಿತರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Nepal Violence: ಮೃತರ ಸಂಖ್ಯೆ 25ಕ್ಕೆ ಏರಿಕೆ, ಎಲ್ಲ ವಿಮಾನ ನಿಲ್ದಾಣ ಬಂದ್‌

ಅಶ್ಲೀಲ ವಿಡಿಯೋ ಹರಿಬಿಡುವುದಾಗಿ ಶಾಸಕ ಪ್ರಭು ಚವಾಣ್‌ಗೆ ಬೆದರಿಕೆಯೊಡ್ಡಿ ಹಣಕ್ಕೆ ಬೇಡಿಕೆ

ಮುಂದಿನ ಸುದ್ದಿ
Show comments