Select Your Language

Notifications

webdunia
webdunia
webdunia
webdunia

ಜೆಡಿಯು ಬಿಜೆಪಿಯೊಂದಿಗಿನ ಮೈತ್ರಿ ವಾಪಸ್?

ಜೆಡಿಯು ಬಿಜೆಪಿಯೊಂದಿಗಿನ ಮೈತ್ರಿ ವಾಪಸ್?
ಇಂಫಾಲ್ , ಬುಧವಾರ, 31 ಆಗಸ್ಟ್ 2022 (10:51 IST)
ಇಂಫಾಲ್  : ಇತ್ತೀಚೆಗೆ ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡ ನಿತೀಶ್‌ ಕುಮಾರ್ ನೇತೃತ್ವದ ಜೆಡಿಯು (ಜನತಾದಳ) ಮಣಿಪುರದಲ್ಲೂ ಬಿಜೆಪಿಯಿಂದ ಮೈತ್ರಿ ಹಿಂಪಡೆಯಲಿದೆ ಎಂದು ಮೂಲಗಳು ತಿಳಿಸಿವೆ.
 
ಒಂದು ವೇಳೆ ಜೆಡಿಯು ಮೈತ್ರಿ ಮುರಿದುಕೊಂಡರೂ ಆಡಳಿತಾರೂಢ ಬಿಜೆಪಿಗೆ ಯಾವುದೇ ಅಪಾಯವಿಲ್ಲ. ಪ್ರಸ್ತುತ ಮಣಿಪುರದ 60 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ 55 ಶಾಸಕರ ಬಲ ಹೊಂದಿದೆ. ಇದರಲ್ಲಿ 7 ಶಾಸಕರು ಜೆಡಿಯುನವರು ಇದ್ದಾರೆ.

ಒಂದು ವೇಳೆ ಬಿಜೆಪಿಯಿಂದ ಬೆಂಬಲ ಹಿಂಪಡೆದುಕೊಂಡರು ಆಡಳಿತ ಪಕ್ಷಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಏಕೆಂದರೆ ಬಹುಮತ 31ಕ್ಕಿಂತ ಹೆಚ್ಚಿನ ಶಾಸಕರ ಬಲ ಹೊಂದಿರುವುದರಿಂದ ಬಿಜೆಪಿ ಏಕ ಪಕ್ಷೀಯವಾಗಿ ಆಡಳಿತ ನಡೆಸಬಹುದಾಗಿದೆ.

ಸೆಪ್ಟಂಬರ್ 3, 4ರಂದು ಪಾಟ್ನಾದಲ್ಲಿ ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಜೆಡಿಯು ರಾಷ್ಟ್ರೀಯ  ನಾಯಕರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಸೋವಿಯತ್ ನಾಯಕ ಮಿಖಾಯಿಲ್ ಗೋರ್ಬಚೇವ್ ನಿಧನ