Select Your Language

Notifications

webdunia
webdunia
webdunia
webdunia

ಜಾರ್ಖಂಡ್: ಥಲಸ್ಸೆಮಿಯಾದಿಂದ ಬಳಲುತ್ತಿದ್ದ 5 ಮಕ್ಕಳಿಗೆ ರಕ್ತ ನೀಡಿದ ಬಳಿಕ ಎಚ್‌ಐವಿ ಪಾಸಿಟಿವ್‌

Thalassemia Symptoms

Sampriya

ಜಾರ್ಖಂಡ್ , ಭಾನುವಾರ, 26 ಅಕ್ಟೋಬರ್ 2025 (17:35 IST)
Photo Credit X
ಚೈಬಾಸಾ(ಜಾರ್ಖಂಡ್): ಆಘಾತಕಾರಿ ಘಟನೆಯೊಂದರಲ್ಲಿ, ಜಾರ್ಖಂಡ್‌ನ ಚೈಬಾಸಾದ ಆಸ್ಪತ್ರೆಯಲ್ಲಿ ಥಲಸ್ಸೆಮಿಯಾದಿಂದ ಬಳಲುತ್ತಿರುವ ಐದು ಮಕ್ಕಳಿಗೆ ರಕ್ತವನ್ನು ನೀಡಿದ ನಂತರ ಎಚ್‌ಐವಿ ಸೋಂಕಿಗೆ ಒಳಗಾಗಿರುವ ಆಘಾತಕಾರಿ ಘಟನೆ ನಡೆದಿದೆ. 

ಈ ಸಂಬಂಧ ರಾಜ್ಯ ಸರ್ಕಾರವು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, ಎರಡು ದಿನಗಳಲ್ಲಿ ಹಲವಾರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ ಎಂದು ಹೇಳಿದರು. 

ಥಲಸ್ಸೆಮಿಯಾದಿಂದ ಬಳಲುತ್ತಿರುವ ಮಕ್ಕಳಲ್ಲಿ ರಕ್ತ ವರ್ಗಾವಣೆಯ ಮೂಲಕ ಎಚ್‌ಐವಿ ಸೋಂಕಿಗೆ ಒಳಗಾಗುವ ಸಾಧ್ಯತೆಯ ವಿಷಯವು ಅತ್ಯಂತ ಗಂಭೀರವಾಗಿದೆ.

ಎರಡು ದಿನಗಳ ಹಿಂದೆ ಈ ವಿಷಯವು ನನ್ನ ಗಮನಕ್ಕೆ ಬಂದಿತು, ತಕ್ಷಣ ನಾನು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದೇನೆ ಎಂದು ಸಚಿವರು ಇಂದು ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗಂಭೀರ ವಿಷಯವೆಂದರೆ, ಚೈಬಾಸಾದ ಸಿವಿಲ್ ಸರ್ಜನ್, ಸದಾರ್ ಆಸ್ಪತ್ರೆಯ ಎಚ್‌ಐವಿ ಘಟಕದ ಪ್ರಭಾರಿ ವೈದ್ಯರು ಮತ್ತು ಸಂಬಂಧಪಟ್ಟ ತಂತ್ರಜ್ಞರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಅವರು ಬರೆದಿದ್ದಾರೆ. 

ಈ ಮಧ್ಯೆ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತ ಚಿಕಿತ್ಸೆಯೊಂದಿಗೆ ಪೀಡಿತ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಚೀನಾ, ಭಾರತ ನಡುವೆ ನೇರ ವಿಮಾನ ಹಾರಾಟ ಶುರು