ಜಾರ್ಖಂಡ್: ಥಲಸ್ಸೆಮಿಯಾದಿಂದ ಬಳಲುತ್ತಿದ್ದ 5 ಮಕ್ಕಳಿಗೆ ರಕ್ತ ನೀಡಿದ ಬಳಿಕ ಎಚ್‌ಐವಿ ಪಾಸಿಟಿವ್‌

Sampriya
ಭಾನುವಾರ, 26 ಅಕ್ಟೋಬರ್ 2025 (17:35 IST)
Photo Credit X
ಚೈಬಾಸಾ(ಜಾರ್ಖಂಡ್): ಆಘಾತಕಾರಿ ಘಟನೆಯೊಂದರಲ್ಲಿ, ಜಾರ್ಖಂಡ್‌ನ ಚೈಬಾಸಾದ ಆಸ್ಪತ್ರೆಯಲ್ಲಿ ಥಲಸ್ಸೆಮಿಯಾದಿಂದ ಬಳಲುತ್ತಿರುವ ಐದು ಮಕ್ಕಳಿಗೆ ರಕ್ತವನ್ನು ನೀಡಿದ ನಂತರ ಎಚ್‌ಐವಿ ಸೋಂಕಿಗೆ ಒಳಗಾಗಿರುವ ಆಘಾತಕಾರಿ ಘಟನೆ ನಡೆದಿದೆ. 

ಈ ಸಂಬಂಧ ರಾಜ್ಯ ಸರ್ಕಾರವು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, ಎರಡು ದಿನಗಳಲ್ಲಿ ಹಲವಾರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ ಎಂದು ಹೇಳಿದರು. 

ಥಲಸ್ಸೆಮಿಯಾದಿಂದ ಬಳಲುತ್ತಿರುವ ಮಕ್ಕಳಲ್ಲಿ ರಕ್ತ ವರ್ಗಾವಣೆಯ ಮೂಲಕ ಎಚ್‌ಐವಿ ಸೋಂಕಿಗೆ ಒಳಗಾಗುವ ಸಾಧ್ಯತೆಯ ವಿಷಯವು ಅತ್ಯಂತ ಗಂಭೀರವಾಗಿದೆ.

ಎರಡು ದಿನಗಳ ಹಿಂದೆ ಈ ವಿಷಯವು ನನ್ನ ಗಮನಕ್ಕೆ ಬಂದಿತು, ತಕ್ಷಣ ನಾನು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದೇನೆ ಎಂದು ಸಚಿವರು ಇಂದು ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗಂಭೀರ ವಿಷಯವೆಂದರೆ, ಚೈಬಾಸಾದ ಸಿವಿಲ್ ಸರ್ಜನ್, ಸದಾರ್ ಆಸ್ಪತ್ರೆಯ ಎಚ್‌ಐವಿ ಘಟಕದ ಪ್ರಭಾರಿ ವೈದ್ಯರು ಮತ್ತು ಸಂಬಂಧಪಟ್ಟ ತಂತ್ರಜ್ಞರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಅವರು ಬರೆದಿದ್ದಾರೆ. 

ಈ ಮಧ್ಯೆ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತ ಚಿಕಿತ್ಸೆಯೊಂದಿಗೆ ಪೀಡಿತ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments