ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಹತ್ಯೆ ಆರೋಪಿ ಮೋಹನ್ ನಾಯಕ್‌ಗೆ ನೀಡಿಡದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಣೆ ಮಾಡಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠವು ಈ ಸಂಬಂಧ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಎತ್ತಿಹಿಡಿದಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ಮೋಹನ್ ನಾಯಕ್‌ಗೆ ಅವರು ಜಾಮೀನು ಮೂಲಕ ಹೊರಬಂದಿದ್ದರು. ಕರ್ನಾಟಕ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಸಲ್ಲಿಸಲಾದ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ. ಕರ್ನಾಟಕ ಹೈಕೋರ್ಟ್ 2023 ರ ಡಿಸೆಂಬರ್‌ನಲ್ಲಿ ನಾಯಕ್‌ಗೆ ಜಾಮೀನು ನೀಡಿತ್ತು.
2017ರಲ್ಲಿ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಡಿಸೆಂಬರ್ 7, 2023 ರಂದು, ಕರ್ನಾಟಕ ಹೈಕೋರ್ಟ್ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮೋಹನ್ ನಾಯಕ್‌ಗೆ ಜಾಮೀನು ನೀಡಿತ್ತು. ಈತ ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ವ್ಯಕ್ತಿ.