Webdunia - Bharat's app for daily news and videos

Install App

ಪತ್ರಕರ್ತೆ ಗೌರಿ ಹತ್ಯೆ ಪ್ರಕರಣ: ಆರೋಪಿ ಮೋಹನ್‌ ನಾಯಕ್‌ ಜಾಮೀನು ರದ್ದುಗೆ ಸುಪ್ರೀಂ ನಿರಾಕರಣೆ

Sampriya
ಗುರುವಾರ, 22 ಆಗಸ್ಟ್ 2024 (14:58 IST)
Photo Courtesy X
ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಹತ್ಯೆ ಆರೋಪಿ ಮೋಹನ್ ನಾಯಕ್‌ಗೆ ನೀಡಿಡದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ನಿರಾಕರಣೆ ಮಾಡಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠವು ಈ ಸಂಬಂಧ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಎತ್ತಿಹಿಡಿದಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ಮೋಹನ್ ನಾಯಕ್‌ಗೆ ಅವರು ಜಾಮೀನು ಮೂಲಕ ಹೊರಬಂದಿದ್ದರು. ಕರ್ನಾಟಕ ಹೈಕೋರ್ಟ್‌ ತೀರ್ಪನ್ನು ವಿರೋಧಿಸಿ ಸಲ್ಲಿಸಲಾದ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ. ಕರ್ನಾಟಕ ಹೈಕೋರ್ಟ್ 2023 ರ ಡಿಸೆಂಬರ್‌ನಲ್ಲಿ ನಾಯಕ್‌ಗೆ ಜಾಮೀನು ನೀಡಿತ್ತು.

2017ರಲ್ಲಿ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಡಿಸೆಂಬರ್ 7, 2023 ರಂದು, ಕರ್ನಾಟಕ ಹೈಕೋರ್ಟ್ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮೋಹನ್ ನಾಯಕ್‌ಗೆ ಜಾಮೀನು ನೀಡಿತ್ತು. ಈತ ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ವ್ಯಕ್ತಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments