Webdunia - Bharat's app for daily news and videos

Install App

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಜೆ.ಪಿ. ನಡ್ಡಾ ನೇಮಕ

Webdunia
ಮಂಗಳವಾರ, 18 ಜೂನ್ 2019 (11:00 IST)
ನವದೆಹಲಿ : ಈ ಹಿಂದೆ ಕೇಂದ್ರ ಸಚಿವರಾಗಿದ್ದ ಜೆ.ಪಿ. ನಡ್ಡಾ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲು ಬಿಜೆಪಿಯ ಸಂಸದೀಯ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.




ಜೆ.ಪಿ. ನಡ್ಡಾ(58) ಅವರು ಹಿಂದಿನ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆರೆಸ್ಸೆಸ್ ಜೊತೆ ಉತ್ತಮ ಸಂಬಂಧ ಇಟ್ಟುಕೊಂಡಿರುವ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಜವಾಬ್ದಾರಿಯನ್ನು ಹೊತ್ತು, ಪ್ರತಿಪಕ್ಷಗಳ ವಿರೋಧದ ನಡುವೆಯೂ ಬಿಜೆಪಿಯು ಉತ್ತರ ಪ್ರದೇಶದಲ್ಲಿ ಗೆಲುವು ಸಾಧಿಸಲು ಕಾರಣರಾಗಿದ್ದರು. ಈ ಹಿನ್ನಲೆಯಲ್ಲಿ ಈ ಬಾರಿಯ ಸರ್ಕಾರದಲ್ಲಿ ಅಮಿತ್ ಶಾ ಅವರು ಗೃಹ ಸಚಿವರಾಗಿ ಸಂಪುಟ ಸೇರ್ಪಡೆಯಾದ ಕಾರಣ  .ಪಿ. ನಡ್ಡಾ ಅವರು ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗುವ ನಿರೀಕ್ಷೆಗಳಿದ್ದವು.


ಆದರೆ ಬಿಜೆಪಿಯ ಚಾಣಿಕ್ಯ ಎಂದೇ ಪ್ರಸಿದ್ಧರಾದ ಅಮಿತ್ ಶಾ ಅವರ ಚಾಣಾಕ್ಷತನದಿಂದ  ಬಿಜೆಪಿ ಹಲವಾರು ಚುನಾವಣೆಗಳಲ್ಲಿ ಜಯ ಸಾಧಿಸಿದೆ. ಆದ್ದರಿಂದ ಮಹಾರಾಷ್ಟ್ರ, ಜಾರ್ಖಂಡ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಚುನಾವಣೆ ಮುಗಿಯುವವರೆಗೂ ಅಮಿತ್ ಶಾ ಅವರೇ ಬಿಜೆಪಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎನ್ನಲಾಗಿದೆ. ಆನಂತರ 2020ರ ಜನವರಿಯಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು,. ನಡ್ಡಾ ಅವರೇ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments