ರೋಹ್ಟಕ್ ಜೈಲಿಗೇ ಹೆಲಿಕಾಪ್ಟರ್`ನಲ್ಲಿ ತೆರಳಿ ರಾಮ್ ರಹೀಂಗೆ ಶಿಕ್ಷೆ ಪ್ರಕಟಿಸಲಿರುವ ನ್ಯಾಯಾಧೀಶರು

Webdunia
ಶನಿವಾರ, 26 ಆಗಸ್ಟ್ 2017 (20:24 IST)
ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಸಚ್ಚಾ ಸೌಧದ ಗುರು ಗುರ್ಮೀತ್ ರಾಮ್ ರಹೀಮ್ ಸಿಂಗ್`ಗೆ ಸೋಮವಾರ ರೋಹ್ಟಕ್`ನ ಜೈಲಿನಲ್ಲೇ ಶಿಕ್ಷೆಯ ಪ್ರಮಾಣವನ್ನ ಪ್ರಕಟಿಸಲಾಗುತ್ತೆ.

ಸಾಧ್ವಿಗಳ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಗುರ್ಮೀತ್ ರಾಮ್ ರಹೀಮ್ ಸಿಂಗ್ ದೋಷಿ ಎಂದು ತೀರ್ಪಿತ್ತ ಜಗದೀಪ್ ಸಿಂಗ್, ಹೆಲಿಕಾಪ್ಟರ್ ಮೂಲಕ ರೋಹ್ಟಕ್`ನ ಸುನಾರಿಯಾ ಜೈಲಿಗೆ ತೆರಳಿ ಶಿಕ್ಷೆ ಪ್ರಕಟಿಸಲಿದ್ದಾರೆ. 10 ವರ್ಷಕ್ಕೂ ಅಧಿಕ ಶಿಕ್ಷೆಯಾಗುವ ಸಾಧ್ಯತೆ ಇದೆ. ಜೀವಾವಧಿ ಶಿಕ್ಷೆ ವಿಧಿಸುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

ಸಿಬಿಐ ನ್ಯಾಯಾಧೀಶರಿಗೆ ಸಂಪೂರ್ಣ ಭದ್ರತೆ ಒದಗಿಸುವಂತೆ ಹರ್ಯಾಣ ಮತ್ತು ಪಂಜಾಬ್ ಹೈಕೋರ್ಟ್`ನ ಮುಖ್ಯ ನ್ಯಾಯಮೂರ್ತಿ ಸೇರಿ ಎಲ್ಲ ನ್ಯಾಯಾಧೀಶರು ಜೈಲಧಿಕಾರಿಗಳು ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ತಾಕೀತು ಮಾಡಿದ್ದಾರೆ.  ಡೇರಾ ಗುರು ದೋಷಿಯೆಂದು ಘೋಷಿಸಿದ ಬಳಿಕ ಏರ್ಪಟ್ಟ ಹಿಂಸಾಚಾರದ ಬಳಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷೆ ಘೋಷಿಸಲು ತೀರ್ಮಾನಿಸಲಾಗಿತ್ತು. ಬಳಿಕ ರೋಹ್ಟಕ್`ನಲ್ಲೇ ಶಿಕ್ಷೆ ಪ್ರಕಟಿಸಲು ತೀರ್ಮಾನಿಸಲಾಗಿದೆ. ನಿನ್ನೆ ಅಪರಾಧಿ ರಾಮ್ ರಹೀಮ್ ಸಿಂಗ್`ನನ್ನ ಸಹ ಖಾಸಗಿ ಹೆಲಿಕಾಪ್ಟರ್`ನಲ್ಲಿ ರೋಹದಟಕ್`ಗೆ ಕರೆದೊಯ್ಯಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments