Select Your Language

Notifications

webdunia
webdunia
webdunia
webdunia

ಜ್ಯೂನಿಯರ್ ಸ್ಟೋರಿ : ದಿಂಬಿನೊಂದಿಗೆ ಸೆಕ್ಸ್ ಮಾಡುವಂತೆ ಒತ್ತಾಯ !

ಜ್ಯೂನಿಯರ್ ಸ್ಟೋರಿ : ದಿಂಬಿನೊಂದಿಗೆ ಸೆಕ್ಸ್ ಮಾಡುವಂತೆ ಒತ್ತಾಯ !
ಭೋಪಾಲ್ , ಬುಧವಾರ, 27 ಜುಲೈ 2022 (14:46 IST)
ಭೋಪಾಲ್ : ಮಧ್ಯಪ್ರದೇಶದ ಪ್ರಸಿದ್ಧ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಸೀನಿಯರ್ ವಿದ್ಯಾರ್ಥಿಗಳ ಗುಂಪೊಂದು ಜ್ಯೂನಿಯರ್ಸ್ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದು, ಅವಾಚ್ಯ ಶಬ್ಧದಿಂದ ನಿಂದಿಸಿದ್ದಾರೆ.

ಜೊತೆಗೆ ದಿಂಬಿನೊಂದಿಗೆ ಸೆಕ್ಸ್ ಮಾಡಲು ಒತ್ತಾಯಿಸಿದ್ದಾರೆ ಎಂದು ಕಿರಿಯ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಹೌದು, ಇಂದೋರ್ನ ಎಂಜಿಎಂ ಮೆಡಿಕಲ್ ಕಾಲೇಜಿನಲ್ಲಿ ಹಿರಿಯ ವೈದ್ಯಕೀಯ ಪದವಿ ಮತ್ತು ಬ್ಯಾಚುಲರ್ ಆಫ್ ಸರ್ಜರಿ ವಿದ್ಯಾರ್ಥಿಗಳು ಕೆಲವು ಕಿರಿಯ ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಮಾಡಿರುವ ಆರೋಪವನ್ನು ಎದುರಿಸುತ್ತಿದೆ.

ಈ ಕುರಿತಂತೆ ಕಿರಿಯ ವಿದ್ಯಾರ್ಥಿಯೋರ್ವ ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ (ಯುಜಿಸಿ) ಆ್ಯಂಟಿ ರ್ಯಾಗಿಂಗ್ ಸಹಾಯವಾಣಿಗೆ ಕರೆ ಮಾಡಿ ತಮಗಾದ ಕಹಿ ಘಟನೆ ಬಗ್ಗೆ ವಿವರಿಸಿದ್ದಾರೆ.

ಹಿರಿಯ ಎಂಬಿಬಿಎಸ್ ವಿದ್ಯಾರ್ಥಿಗಳು ಫ್ಲ್ಯಾಟ್ಗಳಲ್ಲಿ ದಿಂಬಿನ ಜೊತೆಗೆ ಸೆಕ್ಸ್ ಮಾಡುವಂತೆ ಮತ್ತು ಮತ್ತು ಬ್ಯಾಚ್ಮೇಟ್ಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸುವಂತೆ, ಅಲ್ಲದೇ ಬಲವಂತವಾಗಿ ಪರಸ್ಪರ ಕಪಾಳಮೋಕ್ಷ ಮಾಡಿಸಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಇಡಿಗೆ ಸುಪ್ರೀಂನಿಂದ ಸಿಕ್ತು ಪರಮಾಧಿಕಾರ