Publish Date: Thu, 12 Mar 2020 (09:06 IST)
Updated Date: Thu, 12 Mar 2020 (09:07 IST)
ನವದೆಹಲಿ : ಮಧ್ಯಪ್ರದೇಶದ ಸರ್ಕಾರದ ವಿರುದ್ಧ ಬಂಡಾಯವೆದ್ದ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ದೆಹಲಿಯ ಕೇಂದ್ರ ಕಚೇರಿಯಲ್ಲಿ ರಾಪ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷದ ಶಾಲು ಧರಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಮಧ್ಯಪ್ರದೇಶದ ಕಮಲನಾಥ್ ಸರ್ಕಾರದ ವಿರುದ್ಧ ಬಂಡಾಯವೆದ್ದ ಸಿಂಧಿಯಾ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಅವರ ಜೊತೆ ಅವರ ಆಪ್ತರು 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರು.