Select Your Language

Notifications

webdunia
webdunia
webdunia
webdunia

ಮೇ 16ಕ್ಕೆ ಕಾಂಗ್ರೆಸ್‌ ಗೆ ರಾಜೀನಾಮೆ ನೀಡಿದ್ದೇನೆ: ಕಪಿಲ್‌ ಸಿಬಾಲ್‌

webdunia
bengaluru , ಬುಧವಾರ, 25 ಮೇ 2022 (14:51 IST)
ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಹಿರಿಯ ಮುಖಂಡ ಕಪಿಲ್‌ ಸಿಬಾಲ್‌ ಮೇ 16ಕ್ಕೆ ಕಾಂಗ್ರೆಸ್‌ ಗೆ ರಾಜೀನಾಮೆ ನೀಡಿದ್ದೇನೆ ಎಂದು ಘೋಷಿಸಿದ್ದಾರೆ.
ಲಕ್ನೋದಲ್ಲಿ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್‌ ಯಾದವ್‌ ಅವರನ್ನು ಭೇಟಿ ಮಾಡಿದ ನಂತರ ಅವರ ಬೆಂಬಲದೊಂದಿಗೆ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ನಂತರ ಅವರು ಈ ವಿಷಯ ತಿಳಿಸಿದರು.
ನಾನು ಕಾಂಗ್ರೆಸ್‌ ಪಕ್ಷವನ್ನು ಮೇ ೧೬ರಂದೇ ತೊರೆದಿದ್ದೇನೆ. ರಾಜ್ಯಸಭೆಯಲ್ಲಿ ಸ್ವತಂತ್ರವಾಗಿ ಚರ್ಚೆ ನಡೆಸಬೇಕಾದ ಅವಶ್ಯಕತೆ ಇರುವುದರಿಂದ ನಾನು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಅವರು ಮಾಧ್ಯಮದವರಿಗೆ ತಿಳಿಸಿದರು.
ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ಬಂಡಾಯ ಘೋಷಿಸಿರುವ 23 ಮುಖಂಡರಲ್ಲಿ ಒಬ್ಬರಾಗಿರುವ ಕಪಿಲ್‌ ಸಿಬಾಲ್‌ ಸಮಾಜವಾದಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿಲ್ಲ. ಬದಲಾಗಿ ಸ್ವತಂತ್ರವಾಗಿ ರಾಜ್ಯಸಭೆ ಪ್ರವೇಶಿಸಲಿದ್ದು, ಸಮಾಜವಾದಿ ಪಕ್ಷದ ಬೆಂಬಲ ಪಡೆದಿರುವುದು ಅಚ್ಚರಿ ಮೂಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತ ಬಾಲಕನ ಮತಾಂತರ, 2 ಮಕ್ಕಳ ತಾಯಿಯೊಂದಿಗೆ ವಿವಾಹ!