Select Your Language

Notifications

webdunia
webdunia
webdunia
Wednesday, 9 April 2025
webdunia

ಕಲ್ಲಾಕುರಿಚಿ ಕಳ್ಳಬಟ್ಟಿ ದುರಂತ: ಇನ್ನೂ ಏರಿಕೆಯಾಗುತ್ತಲೇ ಇದೆ ಮೃತರ ಸಂಖ್ಯೆ

Tamil Nadu

Sampriya

ತಮಿಳುನಾಡು , ಭಾನುವಾರ, 23 ಜೂನ್ 2024 (14:16 IST)
ತಮಿಳುನಾಡು: ಕಲ್ಲಾಕುರಿಚಿಯ ನಡೆದ ಕಳ್ಳಬಟ್ಟಿ ದುರಂತದಲ್ಲಿ ಮೃತರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ ಎಂದು  ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಕಲ್ಲಾಕುರಿಚಿಯ ಜಿಲ್ಲಾಧಿಕಾರಿಗಳು ಹಂಚಿಕೊಂಡ ಮಾಹಿತಿಯ ಪ್ರಕಾರ, ತಮಿಳುನಾಡಿನ ನಾಲ್ಕು ಆಸ್ಪತ್ರೆಗಳಲ್ಲಿ ಒಟ್ಟು 216 ರೋಗಿಗಳು ಅಕ್ರಮ ಮದ್ಯ ಸೇವಿಸಿ ಅಸ್ವಸ್ಥರಾಗಿದ್ದ ಅವರನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿತ್ತು.  

ಜವಾಹರಲಾಲ್ ಇನ್‌ಸ್ಟಿಟ್ಯೂಟ್ ಆಫ್ ಪೋಸ್ಟ್ ಗ್ರಾಜುಯೇಟ್ ಮೆಡಿಕಲ್ ಎಜುಕೇಶನ್ ಅಂಡ್ ರಿಸರ್ಚ್ (ಜಿಪ್ಮರ್), ಪಾಂಡಿಯಲ್ಲಿ ದಾಖಲಾದ ರೋಗಿಗಳಲ್ಲಿ 17 ಮಂದಿ ಚೇತರಿಸಿಕೊಳ್ಳುತ್ತಿದ್ದು, ಮೂವರು ಸಾವನ್ನಪ್ಪಿದ್ದಾರೆ. ಇನ್ನೂ ವಿಲುಪುರಂ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾದ ರೋಗಿಗಳಲ್ಲಿ ನಾಲ್ವರು ಚೇತರಿಸಿಕೊಳ್ಳುತ್ತಿದ್ದರೆ,  ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ.

ಕಲ್ಲಾಕುರಿಚಿ ವೈದ್ಯಕೀಯ ಕಾಲೇಜಿನಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ. ಇಲ್ಲಿ ದಾಖಲಾದ ರೋಗಿಗಳಲ್ಲಿ 31 ಜನರು ಸಾವನ್ನಪ್ಪಿದ್ದಾರೆ ಮತ್ತು 108 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

ಸೇಲಂ ವೈದ್ಯಕೀಯ ಕಾಲೇಜಿನಲ್ಲಿ 30 ಮಂದಿ ಚೇತರಿಸಿಕೊಳ್ಳುತ್ತಿದ್ದರೆ, 18 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಕ್ಷದ ವರಿಷ್ಠರ ಜತೆ ಚರ್ಚಿಸಿ ಸೂರಜ್ ವಿರುದ್ಧ ಕ್ರಮ: ಜಿಟಿ ದೇವೇಗೌಡ