Select Your Language

Notifications

webdunia
webdunia
webdunia
webdunia

ಖ್ಯಾತ ನಟ ಕಮಲ್ ಹಾಸನ್ ಬಲಗಾಲು ಮುರಿತ: ಆಸ್ಪತ್ರೆಗೆ ದಾಖಲು

ಖ್ಯಾತ ನಟ ಕಮಲ್ ಹಾಸನ್ ಬಲಗಾಲು ಮುರಿತ: ಆಸ್ಪತ್ರೆಗೆ ದಾಖಲು
ಚೆನ್ನೈ , ಗುರುವಾರ, 14 ಜುಲೈ 2016 (12:51 IST)
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ನಟ ಕಮಲ್ ಹಾಸನ್ ಆಯ ತಪ್ಪಿ ಬಿದ್ದಿದ್ದರಿಂದ ಕಾಲು ಮುರಿತಕ್ಕೆ ಒಳಗಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 
 
ಕಮಲ್‌ಹಾಸನ್ ಅವರನ್ನು ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
 
 ಆತ್ಮಿಯ ಮೂಲಗಳ ಪ್ರಕಾರ, ಕಮಲ್ ಹಾಸನ್ ತಮ್ಮ ಬಲಗಾಲನ್ನು ಮುರಿದುಕೊಂಡಿದ್ದಾರೆ ಎನ್ನಲಾಗಿದೆ.
 
ಕಮಲ್ ಹಾಸನ್ ತಮ್ಮ ಮುಂದಿನ ಪ್ರೊಜೆಕ್ಟ್ ಆದ ಕಾಮಿಡಿ ಚಿತ್ರದಲ್ಲಿ ನಟಿಸುತ್ತಿದ್ದು ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಒಂದೇ ಬಾರಿಗೆ ತಮಿಳು, ತೆಲುಗು ಮತ್ತು ಹಿಂದಿ ಭಾಷೆಯಲ್ಲಿ ಚಿತ್ರದ ಶೂಟಿಂಗ್ ನಡೆಯಲಿದೆ. 
 
ಬಹುಭಾಷಾ ನಟ ಕಮಲ್ ಹಾಸನ್ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಹಾಸನ್ ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಸರ್ಟಿಫಿಕೇಟ್ ನೀಡಿದ್ರೆ ಜಾರ್ಜ್ ನಿರಪರಾಧಿಯಾಗಲ್ಲ: ಆಶೋಕ್