ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ತಮ್ಮ ಪಕ್ಷದ ಪರವಾಗಿ ನಟ ಕಮಲ್ ಹಾಸನ್ ಭರ್ಜರಿ ಭರವಸೆಗಳನ್ನೇ ನೀಡಿದ್ದಾರೆ.
ಏಪ್ರಿಲ್ ನಲ್ಲಿ ನಡೆಯಲಿರುವ ಚುನಾವಣೆಗೆ ಪ್ರಚಾರ ಆರಂಭಿಸಿದ ಕಮಲ್ ಹಾಸನ್, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 50 ಲಕ್ಷ ಜನರಿಗೆ ಉದ್ಯೋಗ, ಮಹಿಳೆಯರಿಗೆ ಸುರಕ್ಷತೆಯ ಜೀವನ ಕಟ್ಟಿಕೊಡುವುದಾಗಿ ಭರವಸೆ ಕೊಟ್ಟಿದ್ದಾರೆ.
ಕಮಲ್ ಹಾಸನ್ ನೇತೃತ್ವ ಎಂಎನ್ಎಂ ಪಕ್ಷ ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ. ಹೀಗಾಗಿ ಭರ್ಜರಿ ಆಶ್ವಾಸನೆಗಳನ್ನೇ ಕೊಟ್ಟಿದ್ದಾರೆ. ಮಹಿಳೆಯರಿಗೆ ಸುರಕ್ಷತೆಯ ಜೊತೆಗೆ ಸರ್ಕಾರಿ ಸಾಮ್ಯದ ಸಂಸ್ಥೆಗಳಲ್ಲಿ ಶೇ.50 ರಷ್ಟು ಮೀಸಲಾತಿಯನ್ನೂ ನೀಡುವುದಾಗಿ ಹೇಳಿದ್ದಾರೆ.
ಅಷ್ಟೇ ಅಲ್ಲದೆ, ಮಹಿಳೆಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ವಿತರಣೆ, ಮಾನಸಿಕವಾಗಿ ಖಿನ್ನರಾದ ಮಹಿಳೆಯರಿಗೆ, ಏಕಾಂಗಿ ತಾಯಂದಿರಿಗೆ ಆಸರೆ ಎಲ್ಲಾ ಮಹಿಳೆಯರಿಗೆ ಉಚಿತ ವೈದ್ಯಕೀಯ ತಪಾಸಣೆ ವ್ಯವಸ್ಥೆ ಇತ್ಯಾದಿ ಆಕರ್ಷಕ ಭರವಸೆಗಳನ್ನು ನೀಡಿದ್ದಾರೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!