Webdunia - Bharat's app for daily news and videos

Install App

ಕೊನೆಗೂ ಕಂಗನಾ ರನೌತ್ ಗೆ ಸಿಕ್ತು ಬಿಜೆಪಿ ಟಿಕೆಟ್

Krishnaveni K
ಸೋಮವಾರ, 25 ಮಾರ್ಚ್ 2024 (10:10 IST)
ಮುಂಬೈ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಾಲಿವುಡ್ ನಟಿ ಕಂಗನಾ ರನೌತ್ ಬಿಜೆಪಿಯಿಂದ ಸ್ಪರ್ಧಿಸುವುದು ಪಕ್ಕಾ ಆಗಿದೆ. ಅವರ ಹುಟ್ಟೂರಿನಲ್ಲೇ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಇದುವರೆಗೆ ಕಂಗನಾ ಬಿಜೆಪಿ ಪರವಾದ ಹೇಳಿಕೆಗಳನ್ನು ನೀಡುತ್ತಾ ಸುದ್ದಿಯಾಗುತ್ತಿದ್ದರು. ವಿಪಕ್ಷಗಳನ್ನು ಅವಕಾಶ ಸಿಕ್ಕಾಗಲೆಲ್ಲಾ ಟೀಕಿಸುತ್ತಾ ಬಂದಿದ್ದರು. ಅವರ ಕೆಲವೊಂದು ಹೇಳಿಕೆಗಳು ವಿವಾದ ಸೃಷ್ಟಿಸಿದ್ದವು. ಇದರ ನಡುವೆ ಅವರು ರಾಜಕೀಯಕ್ಕೆ ಬರಲಿದ್ದಾರೆ, ಬಿಜೆಪಿ ಸೇರಿಕೊಳ್ಳಲಿದ್ದಾರೆ ಎಂದು ಸುದ್ದಿಯಾಗಿತ್ತು.

ನನಗೆ ಅವಕಾಶ ಸಿಕ್ಕರೆ, ಕೃಷ್ಣನ ಆಶೀರ್ವಾದವಿದ್ದರೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು. ಇದೀಗ ಕೊನೆಗೂ ಅವರಿಗೆ ಬಿಜೆಪಿ ಹಿಮಾಚಲ ಪ್ರದೇಶದಲ್ಲಿ ಟಿಕೆಟ್ ನೀಡಿದೆ. ಹಿಮಾಚಲಪ್ರದೇಶದ ಕಂಗನಾ ತವರೂರು ಮಂಡಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಕಂಗನಾ ಬಿಜೆಪಿ ಪಕ್ಷಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

‘ಬಿಜೆಪಿ ಯಾವತ್ತೂ ನನಗೆ ಷರತ್ತು ರಹಿತ ಬೆಂಬಲ ನೀಡುತ್ತಲೇ ಬಂದಿದೆ. ಇದೀಗ ನನ್ನ ತವರು ಹಿಮಾಚಲ ಪ್ರದೇಶದ ಮಂಡಿಯಲ್ಲಿ ನನಗೆ ಬಿಜೆಪಿ ಪಕ್ಷ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ. ಹೈಕಮಾಂಡ್ ನ ಈ ಅವಕಾಶಕ್ಕೆ ತಲೆಬಾಗುತ್ತೇನೆ. ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ನನಗೆ ಗೌರವದ ವಿಷಯ. ಮುಂದಿನ ದಿನಗಳಲ್ಲಿ ಒಬ್ಬ ಅಮೂಲ್ಯ ಕಾರ್ಯಕರ್ತಳಾಗಿ ಮತ್ತು ಸಾರ್ವಜನಿಕ ಸೇವಕಳಾಗಿ ಕೆಲಸ ಮಾಡುವುದನ್ನು ಎದಿರು ನೋಡುತ್ತಿದ್ದೇನೆ’ ಎಂದು ಕಂಗನಾ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments