ನವದೆಹಲಿ : ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಜೆಎನ್ಯು ವಿದ್ಯಾರ್ಥಿ ಸಂಘಟನೆಯ ನಾಯಕನಾಗಿದ್ದ ಕನ್ಹಯ್ಯ ಕುಮಾರ್ ಅವರು ಇಂದು ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ.
Photo Courtesy: Google
ಕನ್ಹಯ್ಯಾ ಕುಮಾರ್ ಮತ್ತು ಗುಜರಾತ್ ದಲಿತ ನಾಯಕ ಜಿಗ್ನೇಶ್ ಮೇವಾನಿ ಇಂದು ಕಾಂಗ್ರೆಸ್ ಸೇರಲಿದ್ದಾರೆ. ಕನ್ಹಯ್ಯಾ ಕುಮಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸುವ ಪೋಸ್ಟರ್ಗಳು ಇಂದು ಬೆಳಿಗ್ಗೆ ದೆಹಲಿಯ ಕಾಂಗ್ರೆಸ್ ಕಚೇರಿಯ ಹೊರಗೆ ಹಾಕಲಾಗಿದೆ.
ಕನ್ಹಯ್ಯಾ ಕುಮಾರ್ ಅವರು 2019 ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಸೇರಿದ್ದರು. ನಂತರ ಅವರು ತಮ್ಮ ಊರು ಬಿಹಾರದ ಬೇಗುಸರೈಯಿಂದ ಬಿಜೆಪಿಯ ಗಿರಿರಾಜ್ ಸಿಂಗ್ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡರು.