Daily Horoscope

ಎಚ್ ಡಿ ಕುಮಾರಸ್ವಾಮಿ ಪ್ರಮಾಣ ಸ್ವೀಕಾರ ವೇಳೆ ಕನ್ನಡದಲ್ಲೇ ಮೊಳಗಿದ ಜೈಕಾರ

Krishnaveni K
ಭಾನುವಾರ, 9 ಜೂನ್ 2024 (19:53 IST)
ನವದೆಹಲಿ: ನೂತನ ಎನ್ ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಜೆಡಿಎಸ್ ನಾಯಕ, ಕರ್ನಾಟಕದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ವೇಳೆ ಕನ್ನಡದಲ್ಲೇ ಜೈಕಾರ ಮೊಳಗಿತು.
 

ಇಂದು ಮೋದಿ ಸಂಪುಟಕ್ಕೆ ಕುಮಾರಸ್ವಾಮಿ ಕೂಡಾ ಕ್ಯಾಬಿನೆಟ್ ಸಚಿವರಾಗಿ ಸೇರ್ಪಡೆಯಾದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಘಟಾನುಘಟಿ ನಾಯಕರೊಂದಿಗೆ ಮೊದಲ ಸಾಲಿನಲ್ಲೇ ಕೂತಿದ್ದ ಕುಮಾರಸ್ವಾಮಿ ಆಂಗ್ಲ ಭಾಷೆಯಲ್ಲಿ ಪ್ರಮಾಣ ವಚನ ಓದಿದರು.

ಬಿಳಿ ಶರ್ಟ್, ಪಂಚೆಯುಟ್ಟು ಬಂದಿದ್ದ ಕುಮಾರಸ್ವಾಮಿಯವರ ಹೆಸರನ್ನು  ಕರೆದಾಗ ಅವರು ಪ್ರಮಾಣ ಸ್ವೀಕರಿಸಲು ಬರುತ್ತಿದ್ದಂತೇ ನೆರೆದಿದ್ದವರಿಂದ ಕುಮಾರಸ್ವಾಮಿಯವರಿಗೇ ಜೈ ಎಂದು ಕನ್ನಡದಲ್ಲೇ ಕೆಲವರು ಜೈಕಾರ ಘೋಷಿಸಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ, ನಿತಿನ್ ಗಡ್ಕರಿ, ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್,  ಬಿಟ್ಟರೆ ಕುಮಾರಸ್ವಾಮಿ ವೇದಿಕೆಗೆ ಬಂದಾಗ ಭಾರೀ ಜೈಕಾರ ಕೇಳಿಬಂದಿದ್ದು ವಿಶೇಷವಾಗಿತ್ತು.

ಇಷ್ಟು ದಿನ ರಾಜ್ಯ ರಾಜಕಾರಣದಲ್ಲಿದ್ದ ಕುಮಾರಸ್ವಾಮಿ ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಈ ಮೂಲಕ ಕೇಂದ್ರದಲ್ಲಿ ಮಂತ್ರಿಯಾಗುವ ಅವರ ಬಹು ದಿನದ ಕನಸು ನನಸಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments