Select Your Language

Notifications

webdunia
webdunia
webdunia
webdunia

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಗ್ಯಾಂಗ್‌ರೇಪ್

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಗ್ಯಾಂಗ್‌ರೇಪ್
ಕಾನ್ಪುರ್ , ಸೋಮವಾರ, 16 ನವೆಂಬರ್ 2015 (17:40 IST)
ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಮತ್ತೊಂದು ಉದಾಹರಣೆಯಾಗಿ ಎರಡು ಗ್ಯಾಂಗ್‌ರೇಪ್ ಪ್ರಕರಣಗಳು ವರದಿಯಾಗಿವೆ.
 
ಮೊದಲನೆ ಪ್ರಕರಣದಲ್ಲಿ, ಔಷಧಿಗಳನ್ನು ಖರೀದಿಸಿಕೊಂಡು ಮನೆಯ ಕಡೆ ಹೊರಟಿದ್ದ ಎಂಟನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಚಾಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಿಸಿದ ನಾಲ್ಕು ಮಂದಿ ಆರೋಪಿಗಳು ಚಲಿಸುತ್ತಿರುವ ಕಾರಿನಲ್ಲಿಯೇ ಗ್ಯಾಂಗ್‌ರೇಪ್ ಎಸಗಿ ಪರಾರಿಯಾಗಿದ್ದಾರೆ. 
 
ಅತ್ಯಾಚಾರಕ್ಕೊಳಗಾದ ಬಾಲಕಿಯ ಪ್ರಕಾರ, ನಾಲ್ಕು ಮಂದಿ ಆರೋಪಿಗಳು ತನ್ನ ಮೇಲೆ ಗ್ಯಾಂಗ್‌ರೇಪ್ ಎಸಗಿದ ನಂತರ ಉನ್ನಾವ್ ಜಿಲ್ಲೆಯ ಬಂತ್ರಾ ಟೋಲ್ ಪ್ಲಾಜಾ ಬಳಿಯಿರುವ ಪೊದೆಗಳ ಹಿಂದೆ ಎಸೆದು ಪರಾರಿಯಾಗಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. 
 
ಆರೋಪಿಗಳ ವಿರುದ್ಧ ಗ್ಯಾಂಗ್‌ರೇಪ್ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿಯನ್ನು ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
 
ಪಟಾರಾ ಗ್ರಾಮದಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ 16 ವರ್ಷದ ಬಾಲಕಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಗೆಳೆಯರ ನೆರವಿನೊಂದಿಗೆ ಗ್ಯಾಂಗ್‌ರೇಪ್ ಎಸಗಿದ್ದಾನೆ.
 
ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಂದೆಗೆ ಮಧ್ಯಾಹ್ನದ ಊಟ ಕೊಡಲು ಬಾಲಕಿ ತೆರಳಿದ್ದಾಗ ಇಬ್ಬರು ಆರೋಪಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. 
 
ಆರೋಪಿಗಳ ವಿರುದ್ಧ ಗೌತಮ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದರೆ, ಆರೋಪಿಗಳು ಪತ್ತೆಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share this Story:

Follow Webdunia kannada