Select Your Language

Notifications

webdunia
webdunia
webdunia
webdunia

ಕಾನ್ಪುರ:ಮಹಿಳೆಯ ರುಂಡವಿಲ್ಲದ ಬೆತ್ತಲೆ ಮೃತದೇಹ ಹೆದ್ದಾರಿ ಬಳಿ ಪತ್ತೆ

Crime

Sampriya

ಲಖನೌ , ಗುರುವಾರ, 12 ಸೆಪ್ಟಂಬರ್ 2024 (19:56 IST)
ಲಖನೌ: ಉತ್ತರ ಪ್ರದೇಶದ ಕಾನ್ಪುರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಬಳಿ ಮಹಿಳೆಯ ರುಂಡವಿಲ್ಲದ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು, ಪೊಲೀಸರು ಮಹಿಳೆಯ ಗುರುತು ಪತ್ತೆಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಬುಧವಾರ ಕಾನ್ಪುರ ಬಳಿಯ ಗುಜೈನಿ ಎಂಬಲ್ಲಿ ಹೆದ್ದಾರಿ ಬದಿಯಲ್ಲಿ ಮೃತದೇಹ ಪತ್ತೆಯಾಗಿದೆ. ರುಂಡವಿಲ್ಲದೆ ಬೆತ್ತಲೆಯಾಗಿ ಮಹಿಳೆಯ ಮೃತದೇಹ ಪತ್ತೆಯಾಗಿರುವುದಿಂದ, ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆಯಾ ಎಂಬ ಅನುಮಾನ ಶುರುವಾಗಿದೆ. ಈ ಬಗ್ಗೆ ಮರಣೋತ್ತರ ಪರೀಕ್ಷೆ ವರದಿ ಬಂದ್ಮೇಲೆ ತಿಳಿದುಬರಲಿದೆ.

ಇನ್ನೂ ಕೊಲೆ ಮಾಡಿದ ಬಳಿಕ ದೇಹವನ್ನು ಹೆದ್ದಾರಿಯಲ್ಲಿ ಬಿಸಾಡಿರಬಹುದು ಎನ್ನಲಾಗಿದೆ. ಬುಧವಾರ ಮುಂಜಾನೆ ಕೊಲೆಯಾದ ಮಹಿಳೆಯನ್ನೇ ಹೋಲುವವರೊಬ್ಬರು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿವುರುವುದು ಕಂಡು ಬಂದಿತ್ತು. ಮೃತದೇಹ ಅಂದೇ ಬೆಳಗ್ಗೆ ಪತ್ತೆಯಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದುರುಳರು ಯಾವುದೇ ಜಾತಿ, ಧರ್ಮದವರಾಗಲಿ ಸುಮ್ಮನೆ ಬಿಡಲ್ಲ: ಸಿಎಂ ಸಿದ್ದರಾಮಯ್ಯ