Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಸುಪ್ರೀಂ ಮೇಲೆ ನನಗೆ ಭರವಸೆ ಇಲ್ಲ ಎಂದ ಕಪಿಲ್ ಸಿಬಲ್

webdunia
ಮಂಗಳವಾರ, 9 ಆಗಸ್ಟ್ 2022 (08:03 IST)
ನವದೆಹಲಿ : ರಾಜ್ಯಸಭಾ ಸದಸ್ಯ ಹಾಗೂ ಹಿರಿಯ ವಕೀಲರಾದ ಕಪಿಲ್ ಸಿಬಲ್ ಅವರು ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ಕೆಲವು ತೀರ್ಪುಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ಮೇಲೆ ನನಗೆ ಯಾವುದೇ ಭರವಸೆ ಇಲ್ಲ ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್ನಿಂದ ಪರಿಹಾರ ಸಿಗುತ್ತದೆ ಎಂದುಕೊಂಡಿದ್ದರೆ ಅದು ನಿಮ್ಮ ತಪ್ಪು ಭಾವನೆಯಾಗಿದೆ.

ನಾನು ಸುಪ್ರೀಂ ಕೋರ್ಟ್ನಲ್ಲಿ 50 ವರ್ಷಗಳ ಕಾರ್ಯನಿರ್ವಹಿಸಿ ಪೂರ್ಣಗೊಳಿಸಿದ ನಂತರ ಈ ಮಾತನ್ನು ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ. 

ಸುಪ್ರೀಂ ಕೋರ್ಟ್ನಿಂದ ಮಹತ್ವದ ತೀರ್ಪು ಬಂದರೂ, ಅದು ನೆಲದ ವಾಸ್ತವತೆಯನ್ನು ಎಂದಿಗೂ ಬದಲಾಯಿಸುವುದಿಲ್ಲ ಎಂದ ಅವರು, ಈ ವರ್ಷ ನಾನು ಸುಪ್ರೀಂ ಕೋರ್ಟ್ನಲ್ಲಿ 50 ವರ್ಷಗಳ ಅಭ್ಯಾಸವನ್ನು ಪೂರ್ಣಗೊಳಿಸುತ್ತೇನೆ. 50 ವರ್ಷಗಳ ನಂತರ ನನಗೆ ಸುಪ್ರೀಂ ಕೋರ್ಟ್ ಮೇಲೆ ಯಾವುದೇ ಭರವಸೆ ಇಲ್ಲ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಚೈನೀಸ್ ಫೋನ್‍ಗಳು ಬ್ಯಾನ್!