Select Your Language

Notifications

webdunia
webdunia
webdunia
webdunia

ಸಿಬಿಐ ನಿರ್ದೇಶಕರಾಗಿ ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ನೇಮಕ

ಸಿಬಿಐ ನಿರ್ದೇಶಕರಾಗಿ ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ನೇಮಕ
ನವದೆಹಲಿ , ಸೋಮವಾರ, 15 ಮೇ 2023 (13:15 IST)
ನವದೆಹಲಿ : ಕೇಂದ್ರೀಯ ತನಿಖಾ ದಳದ ನಿರ್ದೇಶಕರಾಗಿ ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ನೇಮಕಗೊಂಡಿದ್ದಾರೆ.

ಪ್ರಧಾನ ಮಂತ್ರಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಕೇಂದ್ರೀಯ ತನಿಖಾ ದಳದ ಉನ್ನತ ಹುದ್ದೆಗೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರನ್ನು ಸಚಿವ ಸಂಪುಟಕ್ಕೆ ಶಿಫಾರಸು ಮಾಡಿತ್ತು. ಶನಿವಾರ ಸಂಜೆ ನಡೆದ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಹೆಸರುಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿತ್ತು. 

ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಎರಡು ವರ್ಷಗಳ ಅವಧಿ ಮೇ 25 ರಂದು ಕೊನೆಗೊಳ್ಳಲಿದೆ. ಮೇ 26 ಕ್ಕೆ ಸಿಬಿಐ ನಿರ್ದೇಶಕರಾಗಿ ಪ್ರವೀಣ್ ಸೂದ್ ಅಧಿಕಾರ ಸ್ವೀಕರಿಸಲಿದ್ದಾರೆ.

ರಾಜ್ಯ ಕೇಡರ್ನ 1986-ಬ್ಯಾಚ್ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಈ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ. ಡಿಜಿಪಿ ಪ್ರವೀಣ್ ಸೂದ್ ಆಡಳಿತಾರೂಢ ಬಿಜೆಪಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದು, ಅವರನ್ನು ರಕ್ಷಿಸುತ್ತಿದ್ದಾರೆ. ಪ್ರಧಾನ ಮಂತ್ರಿ, ಸಿಜೆಐ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ. ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಬಹುದು.


Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಎದ್ದು ಓಡುತ್ತೇನೆ, ಜನರಿಂದ ದೂರವಾಗುವ ಜಾಯಮಾನ ನಮ್ಮದಲ್ಲ : ನಿಖಿಲ್ ಕುಮಾರಸ್ವಾಮಿ