Webdunia - Bharat's app for daily news and videos

Install App

ಸುಪ್ರೀಂ ಕೋರ್ಟ್‌ ಅಂಗಳಕ್ಕೆ ಕರ್ನಾಟಕದ ಹನಿಟ್ರ್ಯಾಪ್‌ ಪ್ರಕರಣ: ಪಿಎಎಲ್‌ ವಿಚಾರಣೆಗೆ ಗ್ರೀನ್‌ಸಿಗ್ನಲ್‌

Sampriya
ಸೋಮವಾರ, 24 ಮಾರ್ಚ್ 2025 (14:28 IST)
Photo Courtesy X
ನವದೆಹಲಿ: ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿರುವ ಹನಿಟ್ರ್ಯಾಪ್‌ ಪ್ರಕರಣ ಈಗ ಸುಪ್ರೀಂ ಕೋರ್ಟ್‌ ಅಂಗಳ ತಲುಪಿಸಿದೆ. ಸಚಿವರು, ನ್ಯಾಯಾಧೀಶರು ಸೇರಿದಂತೆ ಹಲವರನ್ನು ಹನಿಟ್ರ್ಯಾಪ್ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಪಿಎಎಲ್‌ ಅರ್ಜಿಯ ಪರಿಶೀಲನೆಗೆ ಸುಪ್ರೀಂಕೋರ್ಟ್ ಇಂದು ಹಸಿರು ನಿಶಾನೆ ನೀಡಿದೆ.

ಮಾಧ್ಯಮ ವರದಿಗಳ ಆಧಾರದ ಮೇಲೆ ಧನ್‌ಬಾದ್‌ ನಿವಾಸಿ ವಿನಯ್ ಕುಮಾರ್ ಸಿಂಗ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ವಿನಯ್ ಪರ ವಕೀಲರಾದ ವರುಣ್ ಕುಮಾರ್ ಸಿಂಗ್ ಅವರು ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠ ವಿಚಾರಣೆಗೆ ಸಮ್ಮತಿ ಸೂಚಿಸಿದ್ದು, ಮುಂದಿನ ಸೋಮವಾರ ಅಥವಾ ಮಂಗಳವಾರ ಈ ಅರ್ಜಿಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.

ಇಂತಹ ಪ್ರಕರಣಗಳನ್ನು ನ್ಯಾಯಾಧೀಶರು ರಾಜಿ ಮಾಡಿಕೊಳ್ಳುವುದರಿಂದ ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಗಂಭೀರ ಅಪಾಯ ಎದುರಾಗುತ್ತದೆ. ನ್ಯಾಯಾಂಗ ವ್ಯವಸ್ಥೆ ಮೇಲಿನ ಸಾರ್ವಜನಿಕ ವಿಶ್ವಾಸಕ್ಕೆ ಧಕ್ಕೆಯುಂಟಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಲು ಬಯಸಿರುವ ಆಕಾಂಕ್ಷಿಯೊಬ್ಬರು ನ್ಯಾಯಾಧೀಶರು ಸೇರಿದಂತೆ ಸಚಿವರು, ಶಾಸಕರನ್ನು ಹನಿಟ್ರ್ಯಾಪ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹಾಲಿ ಸಚಿವರೊಬ್ಬರು ಆರೋಪಿಸಿರುವುದಾಗಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ವಿಧಾನಸಭೆಯಲ್ಲೇ ಈ ವಿಚಾರ ಪ್ರಸ್ತಾಪವಾಗಿದೆ ಎಂದು ವಿವರಿಸಿದ್ದಾರೆ.



 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments