Select Your Language

Notifications

webdunia
webdunia
webdunia
webdunia

ಭ್ರಷ್ಟಾಚಾರದಲ್ಲಿ ಕರ್ನಾಟಕ ದೇಶಕ್ಕೇ ನಂ.1

ಭ್ರಷ್ಟಾಚಾರದಲ್ಲಿ ಕರ್ನಾಟಕ ದೇಶಕ್ಕೇ ನಂ.1
NewDelhi , ಶುಕ್ರವಾರ, 28 ಏಪ್ರಿಲ್ 2017 (11:06 IST)
ನವದೆಹಲಿ: ದೇಶದಲ್ಲಿ ಭ್ರಷ್ಟಾಚಾರ ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಆದರೂ ಅತೀ ಹೆಚ್ಚು ಭ್ರಷ್ಟ ರಾಜ್ಯ ಎಂಬ ಪಟ್ಟಿಯಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆದಿರುವುದು ತಲೆ ತಗ್ಗಿಸುವಂತಾಗಿದೆ.

 
ಸಿಎಂಎಸ್ ಇಂಡಿಯನ್ ಕರಪ್ಷನ್ ಸ್ಟಡಿ ಪ್ರಕಾರ ಕರ್ನಾಟಕದಲ್ಲಿ ಅತೀ ಹೆಚ್ಚು ಭ್ರಷ್ಟಾಚಾರ ತಾಂಡವವಾಡುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಭ್ರಷ್ಟಾಚಾರ ಪ್ರಮಾಣ ಕಡಿಮೆಯಿದೆ.  ಆದರೆ ಒಟ್ಟಾರೆಯಾಗಿ ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ ಭ್ರಷ್ಟಾಚಾರ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ.

2005 ರಲ್ಲಿ ಭ್ರಷ್ಟಾಚಾರ ಪ್ರಮಾಣ ಶೇ. 73 ಕ್ಕೆ ಏರಿಕೆಯಾಗಿತ್ತು. ಆದರೆ ಈ ವರ್ಷ ಇದು ಶೇ. 43 ರಷ್ಟಿದೆ. ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ಅದರಲ್ಲೂ ವಿಶೇಷವಾಗಿ ಪೊಲೀಸ್ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರದ ಪ್ರಮಾಣ ಇಷ್ಟರಮಟ್ಟಿಗೆ ಕಡಿಮೆಯಾಗಿದೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ.

ಪೊಲೀಸ್ ಇಲಾಖೆಯಲ್ಲಿ ಶೇ. 34,  ರಿಯಲ್ ಎಸ್ಟೇಟ್ ನಲ್ಲಿ ಶೇ. 24, ನ್ಯಾಯಾಂಗ ವ್ಯವಸ್ಥೆಯಲ್ಲಿ ಶೇ. 14 ರಷ್ಟು ಹಾಗೂ  ತೆರಿಗೆ ಇಲಾಖೆಯಲ್ಲಿ ಶೇ. 15 ಮತ್ತು ಪಿಡಿಎಸ್ ವಿಭಾಗದಲ್ಲಿ ಶೇ.12 ರಷ್ಟು ಲಂಚಾವತಾರ ಕಂಡುಬಂದಿದೆ ಎಂದು ಸಮೀಕ್ಷೆ ಹೇಳಿದೆ.

ರಾಜ್ಯಗಳ ವಿಚಾರಕ್ಕೆ ಬಂದರೆ ಕರ್ನಾಟಕ 77 ಶೇ.ದೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಆಂಧ್ರಪ್ರದೇಶದಲ್ಲಿ ಶೇ. 74, ತಮಿಳುನಾಡಿನಲ್ಲಿ ಶೇ. 68, ಮಹಾರಾಷ್ಟ್ರದಲ್ಲಿ ಶೇ. 57, ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ. 44 ಮತ್ತು ಪಂಜಾಬ್ ನಲ್ಲಿ ಶೇ. 42 ರಷ್ಟು ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ಪರಿಷತ್ ವಿಪಕ್ಷ ನಾಯಕನ ಸ್ಥಾನ ಕಳೆದುಕೊಳ್ತಾರಾ ಈಶ್ವರಪ್ಪ..? ವರಿಷ್ಠರಿಗೆ ದೂರಲು ಬಿಎಸ್`ವೈ ಇಂದು ದೆಹಲಿಗೆ